ಮೈಸೂರು: ಸರಗೂರು ತಾಲೂಕಿನ ಮೊಳೆಯೂರು ವಲಯದ ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ಸುಮಾರು 35 ವರ್ಷದ ಗಂಡಾನೆಯನ್ನು (Elephant) ಅರಣ್ಯ ಇಲಾಖೆ (Forest Department) ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ವಲಯದ ಮಟದಕಟ್ಟೆ ಬಳಿಯ ಮೂರುಗುಂಡಿ ಹಳ್ಳದಲ್ಲಿ ಸೆರೆ ಹಿಡಿಯಲಾಗಿದೆ. ಸಾಕಾನೆಗಳ ಸಹಾಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಇತ್ತೀಚೆಗೆ ಮೊಳೆಯೂರು ಗ್ರಾಮದಲ್ಲಿ ಓರ್ವ ಆದಿವಾಸಿಯನ್ನು ಈ ಆನೆ ಬಲಿ ಪಡೆದಿತ್ತು. ಇದನ್ನೂ ಓದಿ: ಕಾಫಿ ತೋಟದಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡು – ಅರಣ್ಯ ಸಿಬ್ಬಂದಿ ಮಾಡಿದ್ದೇನು?
ಕಳೆದ ನಾಲ್ಕು ದಿನಗಳಿಂದ ಕಾಡಾನೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಸಾಕಾನೆಗಳಾದ ಏಕಲವ್ಯ, ಸುಗ್ರೀವ, ಪ್ರಶಾಂತ, ಅಯ್ಯಪ್ಪ ಆನೆಗಳ ಮೂಲಕ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಕಾಡಾನೆ ಸೆರೆಹಿಡಿದು ರಾಂಪುರ ಆನೆ ಶಿಬಿರಕ್ಕೆ ರವಾನಿಸಲಾಗಿದೆ. ಇದನ್ನೂ ಓದಿ: ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

