– 1 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ
ಹಾವೇರಿ: ರಾಜ್ಯ ಕಾಂಗ್ರೆಸ್ (Congress) ಸರ್ಕಾರಕ್ಕೆ 1000 ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಹಾವೇರಿ ನಗರದ ಹೊರವಲಯದ ಅಜ್ಜಯ್ಯ ದೇವಸ್ಥಾನದ ಬಳಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ (Haveri Convention) ನಡೆಯುತ್ತಿದೆ. ಈ ಬೃಹತ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪುತ್ಥಳಿ ಅನಾವರಣಗೊಳಿಸಲಾಗಿದೆ. ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಯ ಮಾಡಲಾಗುತ್ತಿದೆ. ರಾಜ್ಯದ 9 ಜಿಲ್ಲೆಯ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣಾ ಮಾಡಲಾಗುತ್ತಿದೆ.
ಒಂದುವರೆ ಲಕ್ಷ ಜನರಿಗೆ ಊಟದ ವ್ಯವಸ್ಥೆ
ಭೂ ಗ್ಯಾರಂಟಿ ಸಮಾವೇಶಕ್ಕೆ ಬರುವ ಜನರಿಗೆ ಭರ್ಜರಿ ಭೋಜನದ ಸಿದ್ಧತೆ ಮಾಡಲಾಗಿದೆ. ಸುಮಾರು ಒಂದುವರೆ ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿ ಅನ್ನಪೂರ್ಣೇಶ್ವರಿ ಕ್ಯಾಟರಿಂಗ್ ಸರ್ವಿಸ್ ಅವರಿಂದ ಊಟ ತಯಾರಾಗಿದೆ. ಸುಮಾರು ಒಂದು ಸಾವಿರ ಬಾಣಸಿಗರಿಂದ ಅಡುಗೆ ತಯಾರಾಗಿದೆ. ವೇದಿಕೆಯ ಬಲ ಮತ್ತು ಎಡ ಭಾಗದಲ್ಲಿ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

120 ಕೌಂಟರ್ ಮೂಲಕ ಕಾರ್ಮಿಕರು ಊಟ ಬಡಿಸಲಿದ್ದಾರೆ. ಪ್ರತಿ 20 ಕೌಂಟರ್‌ಗೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿ, ಪ್ರತಿ 5 ಕೌಂಟರ್‌ಗೆ ತಾಲೂಕು ಮಟ್ಟದ ನೋಡಲ್ ಅಧಿಕಾರಿಗೆ ಉಸ್ತುವಾರಿ ನೀಡಲಾಗಿದೆ. ಊಟಕ್ಕೆ ಪಲಾವ್, ಮೊಸರನ್ನ, ಬೊಂದಿ ಲಾಡು, ಉಪ್ಪಿನಕಾಯಿ, ಮಜ್ಜಿಗೆ ಪ್ಯಾಕೇಟ್ ವಿತರಣೆ ಮಾಡಲಾಗುತ್ತಿದೆ.

ಸಿರಿ ಧಾನ್ಯಗಳ ನಾಮಫಲಕದ ಮೂಲಕ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಭೂ ಗ್ಯಾರಂಟಿ ಪುಸ್ತಕ ಬಿಡುಗಡೆ ಮಾಡಲಾಯಿತು. ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಉತ್ತಮ ಕೆಲಸ ಮಾಡಿದ ತಹಶೀಲ್ದಾರ್‌ಗಳಿಗೆ ಸನ್ಮಾನ ಮಾಡಲಾಗಿದೆ.
ಸಿಎಂ ಪುತ್ಥಳಿ ಅನಾವರಣ
ಹಾವೇರಿ ಸಮಾವೇಶ ವೇದಿಕೆಯಲ್ಲಿ ಸಿಎಂ ಪುತ್ತಳಿ ಅನಾವರಣಗೊಳಿಸಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ನಿಂತಂತೆ ಪುತ್ಥಳಿ ರಚನೆಯಾಗಿದೆ. ಗೊಟಗೋಡಿ ರಾಕ್ ಗಾರ್ಡನ್ ಮುಖ್ಯಸ್ಥ ದಾಸನೂರ್ ಅವರು ಈ ಪುತ್ಥಳಿ ಕೊಡುಗೆ ನೀಡಿದ್ದಾರೆ. ಸಿಎಂ ಪುತ್ಥಳಿ ನೋಡಿ ಡಿಸಿಎಂ ಮಂದಹಾಸ ಬೀರಿದ್ದಾರೆ. ಇದೇ ವೇಳೆ ಧಾನಿ ದಾಸನೂರ್‌ಗೆ ಸಿಎಂ ಹಾಗೂ ಡಿಸಿಎಂ ಅಭಿನಂದಿಸಿದ್ದಾರೆ.
ಸಾಧನ ಸಮಾವೇಶದಲ್ಲಿ ಸಚಿವರಾದ ಸತೀಶ್ ಜಾರಕಿಹೋಳಿ, ಹೆಚ್.ಕೆ.ಪಾಟೀಲ್ ಹಾಗೂ ಶಿವಾನಂದ ಪಾಟೀಲ್ ಸೇರಿದಂತೆ ಹಲವು ಸಚಿವರು ಭಾಗಿಯಾಗಿದ್ದಾರೆ. ಭದ್ರತೆಗಾಗಿ ಮೂರು ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿರೋ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯೋದು ನನ್ನ ಅಜೆಂಡಾ – ಹೆಚ್‌ಡಿಕೆ

