Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Bellary

ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Public TV
Last updated: February 14, 2026 3:26 pm
Public TV
Share
2 Min Read
railway track
ಸಾಂದರ್ಭಿಕ ಚಿತ್ರ
SHARE

ನವದೆಹಲಿ: ದೆಹಲಿ, ಹರಿಯಾಣ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳಾದ್ಯಂತ ಒಟ್ಟು 12 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿಟ್ರ‍್ಯಾಕ್ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಕೇಂದ್ರ ಸಚಿವ ಸಂಪುಟ ಸಮಿತಿಯು ಕೇಂದ್ರ ರೈಲ್ವೆ ಸಚಿವಾಲಯದ ಮೂರು ಯೋಜನೆಗಳನ್ನು ಒಟ್ಟು 18,509 ಕೋಟಿ ರೂ. ಅಂದಾಜು ವೆಚ್ಚದೊಂದಿಗೆ ಅನುಮೋದಿಸಿದೆ. ಇದನ್ನೂ ಓದಿ:Explainer | ಪಬ್‌ಜಿ, ಬ್ಲೂ ವೇಲ್‌, ಕೊರಿಯನ್‌ ಲವ್‌ ಗೇಮ್‌ – ಮಕ್ಕಳ ಜೀವ ಕಸಿಯುತ್ತಿದೆ ಆನ್‌ಲೈನ್‌ ಗೇಮಿಂಗ್‌ ಗೀಳು

ಕಸಾರಾ-ಮನ್ಮಾಡ್ 3ನೇ ಮತ್ತು 4ನೇ ಮಾರ್ಗ, ದೆಹಲಿ-ಅಂಬಾಲ 3ನೇ ಮತ್ತು 4ನೇ ಮಾರ್ಗ, ಬಳ್ಳಾರಿ – ಹೊಸಪೇಟೆ 3ನೇ ಮತ್ತು 4ನೇ ಮಾರ್ಗಕ್ಕೆ ಅನುಮೋದನೆ ಸಿಕ್ಕಿದೆ. ಬಳ್ಳಾರಿ ಹೊಸಪೇಟೆ ನಾಲ್ಕನೇ ಮಾರ್ಗಕ್ಕೆ ಅಂದಾಜು 2,372 ಕೋಟಿ ರೂ. ವೆಚ್ಚ ಆಗಲಿದೆ.

ಕರ್ನಾಟಕಕ್ಕೆ ವಿಶೇಷ ಪ್ರಯೋಜನಗಳು
ಬಳ್ಳಾರಿ-ಹೊಸಪೇಟೆ ಮೂರನೇ ಮತ್ತು ನಾಲ್ಕನೇ ಮಾರ್ಗ ಯೋಜನೆಯು ರಾಜ್ಯದ ಉಕ್ಕು ಮತ್ತು ಗಣಿಗಾರಿಕಾ ಕೇಂದ್ರವಾದ ಬಳ್ಳಾರಿ ಪ್ರದೇಶದಲ್ಲಿ ದಟ್ಟಣೆಯನ್ನು ನಿವಾರಿಸಿ, ಸರಕು ಸಾಗಣೆಯನ್ನು ಸುಗಮಗೊಳಿಸಲಿದೆ. ಈ ಯೋಜನೆಯು ಹೊಸಪೇಟೆಯಿಂದ ಹಂಪಿ, ಬಳ್ಳಾರಿ ಕೋಟೆ, ದರೋಜಿ ಕರಡಿ ಅಭಯಾರಣ್ಯ, ತುಂಗಭದ್ರಾ ಅಣೆಕಟ್ಟು, ಕೆಂಚನಗುಡ್ಡ ಮತ್ತು ವಿಜಯ ವಿಠ್ಠಲ ದೇವಾಲಯ ಮುಂತಾದ ಪ್ರಮುಖ ಪ್ರವಾಸಿ ತಾಣಗಳಿಗೆ ರೈಲು ಸಂಪರ್ಕವನ್ನು ಸುಧಾರಿಸುತ್ತದೆ.

ಈ ಯೋಜನೆಯಿಂದ ಸುಮಾರು 3,902 ಹಳ್ಳಿಗಳು (ಸುಮಾರು 97 ಲಕ್ಷ ಜನಸಂಖ್ಯೆ) ಹೆಚ್ಚುವರಿ ಸಂಪರ್ಕ ಪಡೆಯಲಿವೆ. ಕಲ್ಲಿದ್ದಲು, ಉಕ್ಕು, ಕಬ್ಬಿಣದ ಅದಿರು, ಸಿಮೆಂಟ್, ಸುಣ್ಣದ ಕಲ್ಲು, ಕಂಟೇನರ್, ಆಹಾರ ಧಾನ್ಯಗಳು, ಸಕ್ಕರೆ, ರಸಗೊಬ್ಬರಗಳು ಮುಂತಾದ ಸರಕುಗಳ ಸಾಗಣೆಗೆ ದೊಡ್ಡಮಟ್ಟದ ಸಾಮರ್ಥ್ಯ ಹೆಚ್ಚಳವಾಗಲಿದೆ. ಒಟ್ಟು ಯೋಜನೆಗಳಿಂದ ವರ್ಷಕ್ಕೆ 96 ಮಿಲಿಯನ್ ಟನ್ ಹೆಚ್ಚುವರಿ ಸರಕು ಸಾಗಣೆ ಸಾಧ್ಯವಾಗಲಿದೆ. ಪರಿಸರದ ದೃಷ್ಟಿಯಿಂದಲೂ ಈ ಯೋಜನೆಗಳು ಮಹತ್ವದ್ದು. ರೈಲ್ವೆಯು ಪರಿಸರ ಸ್ನೇಹಿ ಸಾರಿಗೆ ವಿಧಾನವಾಗಿರುವುದರಿಂದ, ತೈಲ ಆಮದು ಸುಮಾರು 22 ಕೋಟಿ ಲೀಟರ್ ಕಡಿಮೆಯಾಗಲಿದ್ದು, CO₂ ಹೊರಸೂಸುವಿಕೆಯು 111 ಕೋಟಿ ಕೆ.ಜಿ. ಕಡಿಮೆಯಾಗಿ, ಇದು 4 ಕೋಟಿ ಮರಗಳನ್ನು ನೆಟ್ಟಷ್ಟು ಪರಿಣಾಮ ಬೀರುತ್ತದೆ. ಇದರಿಂದ ದೇಶದ ಲಾಜಿಸ್ಟಿಕ್ಸ್ ವೆಚ್ಚ ಕಡಿಮೆಯಾಗಿ, ಆರ್ಥಿಕತೆಗೆ ಉತ್ತೇಜನ ಸಿಗಲಿದೆ.

ಈ ಯೋಜನೆಗಳು 2030-31ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. PM-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್‌ನಡಿ ಈ ಯೋಜನೆಗಳನ್ನು ರೂಪಿಸಲಾಗಿದ್ದು, ಬಹು-ಮೋಡ್ ಸಂಪರ್ಕ ಮತ್ತು ಲಾಜಿಸ್ಟಿಕ್ಸ್ ದಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ.ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪುತ್ಥಳಿ ಅನಾವರಣ

TAGGED:BallaryHospetnewdelhiಕೇಂದ್ರ ಸಚಿವ ಸಂಪುಟನವದೆಹಲಿಬಳ್ಳಾರಿರೈಲ್ವೆ ಇಲಾಖೆಹೊಸಪೇಟೆ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Haveri Samavesha
Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪುತ್ಥಳಿ ಅನಾವರಣ

Public TV
By Public TV
1 minute ago
Online Game
Explainer

Explainer | ಪಬ್‌ಜಿ, ಬ್ಲೂ ವೇಲ್‌, ಕೊರಿಯನ್‌ ಲವ್‌ ಗೇಮ್‌ – ಮಕ್ಕಳ ಜೀವ ಕಸಿಯುತ್ತಿದೆ ಆನ್‌ಲೈನ್‌ ಗೇಮಿಂಗ್‌ ಗೀಳು

Public TV
By Public TV
3 minutes ago
Mumbai Vande Bharat Express Train Man Arrested For Releasing Snake in Washroom
Latest

ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಾವು ಬಿಟ್ಟ ವ್ಯಕ್ತಿ ಅರೆಸ್ಟ್

Public TV
By Public TV
20 minutes ago
HDK 2 1
Bengaluru City

ರಾಜ್ಯದಲ್ಲಿರೋ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯೋದು ನನ್ನ ಅಜೆಂಡಾ – ಹೆಚ್‌ಡಿಕೆ

Public TV
By Public TV
25 minutes ago
Mumbai metro 2
Latest

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ!

Public TV
By Public TV
1 hour ago
BY Vijayendra 1
Bengaluru City

ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?