ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನೆಲಮಂಗಲ (Nelamangala) ತಾಲೂಕಿನ ಕೆಂಗಲ್ ಕೆಂಪೋಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ. ವೇಗವಾಗಿ ಬಂದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
ಸದ್ಯ ಗಾಯಾಳು ಸವಾರನನ್ನು NHAI ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

