ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ (Daali Dhananjaya) ಹಾಗೂ ಧನ್ಯತಾ (Dr. Dhanyatha) ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಸಿಹಿ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ದಂಪತಿ ಈ ಕುರಿತು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, Our universe is expanding ಎಂದು ಬರೆದುಕೊಂಡಿದ್ದಾರೆ.
View this post on Instagram
ಇದಕ್ಕೂ ಮುನ್ನ ಸೋಷಿಯಲ್ ಮೀಡಿಯಾದಲ್ಲಿ ಒಂದು ಫೋಟೋ ವೈರಲ್ ಆಗಿತ್ತು. ಆ ಫೋಟೋದಲ್ಲಿ ಧನ್ಯತಾ ಗರ್ಭವತಿಯಾಗಿರುವುದು ಕಂಡುಬಂದಿತ್ತು. ಆದರೆ ದಂಪತಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿರಲಿಲ್ಲ. ಇದೀಗ ಬೇಬಿ ಬಂಪ್ ಫೋಟೋಶೂಟ್ ಮಾಡಿದ್ದು, ಸುಂದರವಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
2025ರ ಫೆ.16ರಂದು ಡಾಲಿ ಧನಂಜಯ್ ಅವರು ಡಾ.ಧನ್ಯತಾ ಜೊತೆ ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆ ಮತ್ತು ಆರತಕ್ಷತೆಗೆ ಸಿನಿಮಾ ರಂಗ ಮತ್ತು ರಾಜಕೀಯದ ಗಣ್ಯರು ಭಾಗಿಯಾಗಿ ಶುಭಹಾರೈಸಿದ್ದರು.



