ಚಿಕ್ಕಬಳ್ಳಾಪುರ: ಪ್ರತಿಷ್ಟಿತ ವಿಶ್ವವಿದ್ಯಾಲಯ ವಿದ್ಯಾರ್ಥಿನಿಯೊಬ್ಬಳು 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ (Doddaballapura Police Station) ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು (Bengaluru) ಸರ್ಜಾಪುರ ಮೂಲದ ನಯನಾ (20) ಮೃತಪಟ್ಟಿರುವ ದುರ್ದೈವಿ. ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್

ಮೃತ ನಯನಾ ದೊಡ್ಡಬಳ್ಳಾಪುರ ಹೊರವಲಯದ ನಾಗದೇನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯ (Gitam University) ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ವ್ಯಾಸಂಗ ಮಾಡುತ್ತಿದ್ದಳು. ಇದನ್ನೂ ಓದಿ: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್ ಆಗುತ್ತಾ?- ಭಾರತದಲ್ಲಿ ಇದು ಸಾಧ್ಯವೇ?
14ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

