ಹಾಸನ: ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅರುಣ್‌ಕುಮಾರ್ ಅವರ ಸೈಟ್ ಮಾಲೀಕತ್ವ ಜಟಾಪಟಿಗೆ ಸಂಬಂಧಿಸಿದಂತೆ ಕೋರ್ಟ್ ಆದೇಶಕ್ಕೆ ಸ್ಟೇ ಸಿಕ್ಕಿದೆ. ಈ ಹಿನ್ನೆಲೆ ಅವರು ಪ್ರಕರಣ ಸಂಬಂಧ ನಡೆದ ಗಲಾಟೆ ವೀಡಿಯೋ ಇರುವ ಪೆನ್‍ಡ್ರೈವ್, ಆದೇಶ ಪ್ರತಿ, ತಾವು ಸೈಟ್ ಖರೀದಿ ಮಾಡಿರುವ ಕ್ರಯ ಪತ್ರಗಳ ದಾಖಲೆ ಜೊತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ಎಸ್ಪಿ ಶುಭನ್ವಿತಾ ಅವರಿಗೆ ದೂರು ನೀಡಿದರು. ಇದನ್ನೂ ಓದಿ: ಯಶ್ ತಾಯಿ ಸೈಟ್ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
ನನ್ನ ಬಳಿ ಸಿಸಿ ಕ್ಯಾಮೆರಾ ದೃಶ್ಯಾವಳಿಗಳು ಇವೆ. ಪೊಲೀಸರು ಭೂ ಮಾಫಿಯಾದವರ ಜೊತೆ ಶಾಮೀಲಾಗಿದ್ದು, ನನಗೆ ನ್ಯಾಯ ಕೊಡಿಸಲು ವಿಫಲರಾಗಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಪೊಲೀಸರ ವಿರುದ್ಧ ಕ್ರಮ ವಹಿಸಬೇಕು ಎಂದು ಎಸ್ಪಿ ಶುಭನ್ವಿತಾ ಅವರಿಗೆ ದೂರು ಸಲ್ಲಿಸಿದರು. ಇದನ್ನೂ ಓದಿ: ಸೈಟ್ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್ ಕಟ್ಟಿಸಲು ಮುಂದಾದ ಯಶ್ ತಾಯಿ
ಏನಿದು ಪ್ರಕರಣ?
ಅಕ್ರಮ ಕಾಂಪೌಂಡ್ ನಿರ್ಮಾಣ ಆರೋಪ ಪ್ರಕರಣದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರಿಗೆ ಕೋರ್ಟ್ ಶಾಕ್ ಕೊಟ್ಟಿತ್ತು. ಬೇರೆಯವರ ಜಾಗದಲ್ಲಿ ನಿರ್ಮಿಸಿದ್ದಾರೆ ಎನ್ನಲಾದ ಕಾಂಪೌಂಡ್‌ನ್ನು ಧ್ವಂಸಗೊಳಿಸಲಾಗಿತ್ತು. ಹಾಸನ (Hassan) ನಗರದ ವಿದ್ಯಾನಗರದಲ್ಲಿ ಪುಷ್ಪಾ ಅವರ ಮನೆ ಇದೆ. ಇವರು ನಿರ್ಮಿಸಿದ್ದ ಕಾಂಪೌಂಡ್‌ನ್ನು ಮೂಲ ಮಾಲೀಕ ಧ್ವಂಸಗೊಳಿಸಿದ್ದರು. ಜೆಸಿಬಿ ಮೂಲಕ ಕಾಂಪೌಂಡ್ ನೆಲಸಮಗೊಳಿಸಿದ್ದರು. 1,500 ಅಡಿ ಜಾಗವನ್ನು ಒತ್ತುವರಿ ಮಾಡಿದ ಆರೋಪ ಇವರ ಮೇಲಿತ್ತು. ಕೋರ್ಟ್ ಅನುಮತಿಯ ಮೇರೆಗೆ ಕಾಂಪೌಂಡ್ ತೆರವುಗೊಳಿಸಲಾಗಿತ್ತು.
ಇದೀಗ ಮೂಲ ದಾವೆ ಸಂಬಂಧ ವಿಚಾರಣೆ ನಡೆಸಿ 2025ರ ಏ.16 ರಂದು ನೀಡಲಾಗಿದ್ದ ಏಕಪಕ್ಷೀಯ ತೀರ್ಪಿನ ಜಾರಿಗೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ.


