ಬೆಂಗಳೂರು: ಸ್ನೇಹಿತರ ಜೊತೆಗೆ ತನ್ನ ಹುಟ್ಟುಹಬ್ಬವನ್ನು ಸಂಭ್ರಮಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ.
ಬೈಕ್ ಹಾಗೂ ಅಶೋಕಾ ಲೈಲಾಂಡ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪವನ್ (24) ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಪವನ್ ಬೆಂಗಳೂರು ಉತ್ತರ ತೋಟದ ಗುಡ್ಡದಹಳ್ಳಿ ನಿವಾಸಿ. ಈತ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಐವರಕಂಡಪುರದ ಬಳಿ ಅಪಘಾತದಲ್ಲಿ ನಿನ್ನೆ ಸಂಜೆ 5:45 ಕ್ಕೆ ಹುಟ್ಟುಹಬ್ಬ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್
ಅಪಘಾತಕ್ಕೆ ಓವರ್ ಸ್ಪೀಡ್‌ನಲ್ಲಿದ್ದ ಗೂಡ್ಸ್ ವಾಹನ ಹಾಗೂ ಬೈಕ್ ಸವಾರ ಕಾರಣ ಎನ್ನಲಾಗಿದೆ. ಬೈಕ್ ಮತ್ತು ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಪವನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸೋಲದೇವನಹಳ್ಳಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

