ನೆಲಮಂಗಲ: ಕತ್ತು ಹಿಸುಕಿ ವೃದ್ಧೆಯನ್ನು ಹತ್ಯೆ ಮಾಡಿ, ಚಿನ್ನಾಭರಣ ದೋಚಿ ಆರೋಪಿಗಳು ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ನಡೆದಿದೆ.
ಶೋಭಾ (69) ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ವದ್ಧ ದಂಪತಿ ಇಬ್ಬರೇ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಇನ್ನೂ ಮೃತ ಮಹಿಳೆಯ ಪತಿ ರಂಗನಾಥ್ ವೀಲ್ ಚೇರ್‌ನಲ್ಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Transport Strike – 38ರ ಬದಲು 26 ತಿಂಗಳ ಹಿಂಬಾಕಿಗೆ ಸರ್ಕಾರ ಒಪ್ಪಿಗೆ
ಮನೆಯಲ್ಲಿ ವೃದ್ಧ ದಂಪತಿ ಮಾತ್ರ ಇರುವುದನ್ನು ಗಮಿನಿಸಿದ್ದ ದರೋಡೆಕೋರರು ವೃದ್ಧೆಯ ಚಿನ್ನಾಭರಣದ ಮೇಲೆ ಕಣ್ಣು ಹಾಕಿದ್ದರು. ಬುಧವಾರ (ಫೆ.18) ಸಂಜೆ ಮನೆಗೆ ನುಗ್ಗಿ ವೃದ್ಧೆಯ ಕತ್ತು ಹಿಸುಕಿ ತಲೆಗೆ ಹೊಡೆದು ಕೊಲೆ ಮಾಡಿ, ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಚಿನ್ನಾಭರಣ ದೋಚಿರುವ ಶಂಕೆಯನ್ನ ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶ್ವಾನದಳ ಆಗಮಿಸಿದೆ. ದರೋಡೆ ಬಗ್ಗೆ ಮಾಹಿತಿ ಸಂಗ್ರಹಿಸಲು ಪೊಲೀಸರು ಅಕ್ಕಪಕ್ಕದ ಮನೆಯ ಸಿಸಿಟಿವಿಯನ್ನ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವ – ರಾಯರ 405ನೇ ಪಟ್ಟಾಭಿಷೇಕ ಮಹೋತ್ಸವ

