ಗದಗ: ಜಿಲ್ಲೆಯಲ್ಲಿ ಕಿಡಿಗೇಡಿಗಳಿಂದ ಮತ್ತೇ ಹಿಂದೂ ದೇವರುಗಳ ವಿಗ್ರಹವನ್ನು ಧ್ವಂಸಗೊಳಿಸಿರುವ ನೀಚ ಕೃತ್ಯ ಮುಂದುವರೆದಿದೆ.
ಇತ್ತೀಚಿಗೆ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದಲ್ಲಿ ಈಶ್ವರ, ನಂದಿ ಹಾಗೂ ಹೊನ್ನತ್ತೆಮ್ಮ ದೇವರುಗಳ ಮೂರ್ತಿ ಭಗ್ನಗೊಳಿಸಿದ್ದರು. ಈ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯ ಮತ್ತೇ ಎರಡು ಕಡೆಗಳಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನಾಳೆ ಸಾರಿಗೆ ಮುಷ್ಕರ ಇಲ್ಲ| ಸರ್ಕಾರಕ್ಕೆ ಮತ್ತೊಂದು ಡೆಡ್‌ಲೈನ್ – ಇಂದು ಏನಾಯ್ತು?
ಮುಂಡರಗಿ ತಾಲೂಕಿನ ಮಲ್ಲಿಕಾರ್ಜುನಪುರ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಆದರಳ್ಳಿ ದೇವರು ಮೂರ್ತಿಗಳನ್ನು ಭಗ್ನಗೊಳಿಸಿದ್ದಾರೆ. ಮಲ್ಲಿಕಾರ್ಜುನಪುರದ ಗಾಳಿ ಬಸವೇಶ್ವರ ದೇವಸ್ಥಾನ ಶಿವಲಿಂಗ, ಪಾಣಿಪೀಠ ಹಾಗೂ ಆದರಳ್ಳಿ ಸಮೀಪದ ದಂಡೇರಿ ಮರಿಯಮ್ಮ ದೇವರುಗಳ ಮೂರ್ತಿ ಭಗ್ನಗೊಳಿಸಿದ್ದಾರೆ. ಇನ್ನು ಮರಿಯಮ್ಮ ದೇವಿ ಮುಖಕ್ಕೆ ಕೀಚಕರು ಮಸಿ ಬಳಿದು ಮುಖ ಧ್ವಂಸಗೊಳಿಸಿದ್ದಾರೆ. ದುಷ್ಟರ ದುಷ್ಕೃತ್ಯಕ್ಕೆ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುರಾತನ ಕಾಲದ ಐತಿಹಾಸಿಕ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕೃತ್ಯ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಜನವಸತಿ ಕಡಿಮೆ ಇರುವ ಪ್ರದೇಶದಲ್ಲಿರುವ ಐತಿಹಾಸಿಕ ದೇವಸ್ಥಾನಗಳಲ್ಲಿ ಧ್ವಂಸ ಕೃತ್ಯ ನಡೆಯುತ್ತಿದೆ. ಮುಂಡರಗಿ ಹಾಗೂ ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಘಟನೆ ನಡೆದಿದೆ.
ಈವರೆಗೂ ಶಿಂಗಟಾಲೂರು ಘಟನೆಗೆ ಕಾರಣರಾದ ಆರೋಪಿಗಳ ಪತ್ತೆ ಆಗಿಲ್ಲ. ಇದೀಗ ಮತ್ತೆ ಎರಡು ಕಡೆಗಳಲ್ಲಿ ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ತರುವಂತಾಗಿದೆ. ಜಿಲ್ಲೆಯ ಖಾಕಿ ಪಡೆ ಇನ್ನಾದರೂ ಈ ಘಟನೆಗಳಿಗೆ ಕಡಿವಾಣ ಹಾಕುತ್ತಾ ಕಾಯ್ದು ನೋಡಬೇಕಿದೆ.ಇದನ್ನೂ ಓದಿ: ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ

