ಹೈದರಾಬಾದ್: ತಿಂಡಿ ಆಸೆ ತೋರಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು 19 ವರ್ಷದ ಯುವಕ ಎಂದು ಗುರುತಿಸಲಾಗಿದ್ದು, ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಎಟಿಎಂಗೆ ಹಾಕಬೇಕಿದ್ದ ಕೋಟ್ಯಂತರ ರೂ. ಹಣ ಗುಳುಂ – ಸಿಬ್ಬಂದಿ ವಿರುದ್ಧ ಶಂಕೆ
ವರದಿಗಳ ಪ್ರಕಾರ, ಆರೋಪಿಯು ಮಗುವಿಗೆ ತಿಂಡಿ ಕೊಡಿಸುವ ಆಸೆ ತೋರಿಸಿ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾನೆ. ಆನಂತರ ಬಾಲಕಿ ಅಳುವುದನ್ನು ಕಂಡು ತಾಯಿ ಕೇಳಿದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ತಾಯಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆಂಧ್ರಪ್ರದೇಶ ರಾಜ್ಯ ಮಹಿಳಾ ಆಯೋಗವು ಘಟನೆಯ ಬಗ್ಗೆ ಗಂಭೀರ ಕಳಂಕ ಮತ್ತು ಆಕ್ರೋಶ ವ್ಯಕ್ತಪಡಿಸಿದೆ. ಅಧ್ಯಕ್ಷೆ ರಾಯಪತಿ ಶೈಲಜಾ ವಿಶಾಖಪಟ್ಟಣ (Visakhapatnam) ನಗರ ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ, ಇಂತಹ ಘಟನೆ ಸಮಾಜಕ್ಕೆ ಕಳಂಕ ಎಂದು ಹೇಳಿದ್ದಾರೆ.ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮ: ಸರ್ಕಾರದ ವಿರುದ್ಧ ಹೋರಾಟ ನಿರಂತರ – ಬಿವೈವಿ

