– ಬಾಗಿಲು ತೆಗೆಯದೆ 6 ಗಂಟೆ ಸತಾಯಿಸಿದ ಆರೋಪಿ
ಕಾರವಾರ: ಕಾಡು ಪ್ರಾಣಿಗಳ ಹತ್ಯೆ ಶಂಕೆಯ ಮೇರೆಗೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಭಟ್ಕಳ (Bhatkal) ತಾಲೂಕಿನ ಹುರುಳಿಸಾಲದ ಮನೆ ಒಂದರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 21 ಕೆಜಿ ಜಿಂಕೆ ಮಾಂಸ, ಜಿಂಕೆ (Deer) ಕೊಬ್ಬು ಹಾಗೂ ಎರಡು ಏರ್‌ಗನ್‌ಗಳು ಪತ್ತೆಯಾಗಿವೆ.
ಜಾಫರ್ ಬ್ರಹ್ಮವರ್ ಎಂಬಾತ ಕಾಡಿನಲ್ಲಿ ಪ್ರಾಣಿಯನ್ನು ಹತ್ಯೆ ಮಾಡಿ, ಮಾಂಸವನ್ನು ಮನೆಯ ಪಕ್ಕದಲ್ಲೇ ಬೇರ್ಪಡಿಸಿ ಉಳಿದ ಅವಶೇಷಗಳನ್ನು ಪಾಳುಬಿದ್ದ ಬಾವಿಗೆ ಎಸೆದಿದ್ದ. ದಾಳಿ ವೇಳೆ ಅಧಿಕಾರಿಗಳು ಬಾವಿಯಲ್ಲಿದ್ದ ಅವಶೇಷಗಳನ್ನು ಹೊರತೆಗೆದು ಪರಿಶೀಲಿಸಿ ಮನೆ ಒಳಗೆ ಶೋಧಕ್ಕೆ ಮುಂದಾಗಿದ್ದಾರೆ. ಆರಂಭದಲ್ಲಿ ಮನೆಯವರು ಬಾಗಿಲು ತೆರೆದು ಸಹಕರಿಸದೆ ವಿರೋಧ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಕಾರವಾರ| ಹುಲಿ ಸಮೀಕ್ಷೆಗೆ ಅಳವಡಿಸಿದ್ದ ಕ್ಯಾಮೆರಾ ಟ್ರ್ಯಾಪ್ ಕಳ್ಳತನ
ಸುಮಾರು ಆರು ಗಂಟೆಗಳ ಕಾಲ ಅಧಿಕಾರಿಗಳು ಕಾದ ಬಳಿಕ ಬಾಗಿಲು ತೆರೆಯಲಾಯಿತು. ನಂತರ ನಡೆದ ಶೋಧದಲ್ಲಿ ಫ್ರಿಡ್ಜ್‌ನಲ್ಲಿ 21 ಕೆಜಿ ಮಾಂಸ ಪತ್ತೆಯಾಗಿದೆ. ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದ ಸಿಹಿನೀರಿನ ಏಡಿ ಪತ್ತೆ

