– ಕರ್ನಾಟಕದಲ್ಲೂ ಕಾಂಗ್ರೆಸ್ ವಿರುದ್ಧ ರಣಕಹಳೆ
ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆ (India AI Impact Summit) ಇಡೀ ಜಗತ್ತಿನ ಗಮನ ಸೆಳೆದಿದೆ. ಆದರೆ, ಶೃಂಗಸಭೆಯ ಕೊನೆಯ ದಿನ ಯುವ ಕಾಂಗ್ರೆಸ್ ಪಕ್ಷದ 10 ಕಾರ್ಯಕರ್ತರು ಅಂಗಿ ತೆಗೆದು ಅರೆಬೆತ್ತಲೆಯಾಗಿ ಪ್ರತಿಭಟನೆ (Congress Half Naked Protest) ನಡೆಸಿದ್ದು, ಬಿಜೆಪಿಗರ ಕಣ್ಣು ಕೆಂಪಾಗಿಸಿದೆ. ಶೃಂಗಸಭೆ ನಡೆಯುತ್ತಿರುವ ಸ್ಥಳದಲ್ಲೇ ಹತ್ತು ಮಂದಿ ದಿಢೀರನೇ ಶರ್ಟ್ ಬಿಚ್ಚಿ, ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಕಾಂಗ್ರೆಸ್ಸಿಗರ ಈ ವರ್ತನೆಯನ್ನು ಖಂಡಿಸಿ ಬಿಜೆಪಿ (BJP) ಟೀಮ್ ಇಂದು ದೇಶಾದ್ಯಂತ ಪ್ರತಿಭಟನೆಗೆ ಇಳಿದಿದೆ.
ದೆಹಲಿ, ಮುಂಬೈ, ಕರ್ನಾಟಕ ಸೇರಿದಂತೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಬೆಂಕಿ ಉಗುಳುತ್ತಿದ್ದಾರೆ. ದೇಶದ ಹಲವೆಡೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ದೆಹಲಿಯಲ್ಲಿ ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದರು. ಇದೇ ಸಂದರ್ಭದಲ್ಲಿ ಭಾರೀ ಹೈಡ್ರಾಮಾ ನಡೆಯಿತು. ಇದನ್ನೂ ಓದಿ: 5 ಲಕ್ಷ ಕಮಿಷನ್ ಪಡೆಯುವಾಗ ಲಾಕ್ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ
ದೆಹಲಿ ಮಾತ್ರವಲ್ಲದೇ ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಥಾಣೆಯಲ್ಲಿ ರಾಹುಲ್ ಗಾಂಧಿಗೆ ಕಪ್ಪುಪಟ್ಟಿ ಪ್ರದರ್ಶಿಸಲಾಯಿತು. ಇದಲ್ಲದೇ ಮುಂಬೈ, ಸೂರತ್, ಜೈಪುರ್, ಜಮ್ಮುವಿನಲ್ಲೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಭಾರೀ ಹೈಡ್ರಾಮಾ ಸೃಷ್ಟಿಸಿತು. ಇದನ್ನೂ ಓದಿ: ಕಾರಿನಲ್ಲಿ ತೆರಳುತ್ತಿದ್ದ ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

ಬೆಂಗಳೂರು, ಬೆಳಗಾವಿ, ಬಳ್ಳಾರಿಯಲ್ಲಿ ಪ್ರತಿಭಟನೆ:
ದೆಹಲಿಯ ಎಐ ಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಬೆಂಗಳೂರಿನಲ್ಲೂ ಬಿಜೆಪಿಗರು ಪ್ರತಿಭಟನೆ ನಡೆಸಿದರು. ನಗರದ ಫ್ರೀಡಂಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಶಾಸಕ ಸಿ.ಕೆ ರಾಮಮೂರ್ತಿ, ಸಪ್ತಗಿರಿಗೌಡ, ಎಸ್ ಹರೀಶ್, ಧೀರಜ್ ಮುನಿರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಭಾರತ್ ಮಂಟಪಮ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಅರೆಬೆತ್ತಲೆ ಪ್ರತಿಭಟನೆಗೆ ಖಂಡನೆ ವ್ಯಕತಪಡಿಸಿದರು. ಈ ವೇಳೆ ಭಾರೀ ಹೈಡ್ರಾಮಾ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪ್ರತಿಭಟನಾಕಾರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಇದನ್ನೂ ಓದಿ: ಕೂಲಿ ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿ – ಮಗು ಸೇರಿ ನಾಲ್ವರು ದುರ್ಮರಣ
ಇನ್ನು, ಕಾಂಗ್ರೆಸ್ಸಿಗರ ಪ್ರತಿಭಟನೆಯನ್ನು ಶಾಸಕ ಆಶ್ವಥ್ ನಾರಾಯಣ ಟೀಕಿಸಿದರು. ಯೂತ್ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆಯು ಚೀಪ್ ಪಬ್ಲಿಟಿಸಿ ಕೆಲಸ ಅಂದರು. ಇದೆಲ್ಲ ಬಿಜೆಪಿ ಸಂಪೂರ್ಣವಾಗಿ ಖಂಡಿಸುತ್ತೆ. ಕಾಂಗ್ರೆಸ್ ಪಕ್ಷದ ನಾಯಕರಿಗೆ ಒಳ್ಳೆಯದಾಗೋದನ್ನ ಸಹಿಸಲಾಗುತ್ತಿಲ್ಲ. ನಾವು ಒಳ್ಳೆಯದನ್ನು ಮಾಡಲ್ಲ, ಮಾಡೋದನ್ನ ಸಹಿಸಲ್ಲ ಅನ್ನುವಂತೆ ಮಾಡಿದ್ದಾರೆ. ದೇಶಕ್ಕೆ ಅಗೌರವ ಕೊಡುವ ದೇಶದ್ರೋಹ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು. ಜೊತೆಗೆ ಯುವ ಕಾಂಗ್ರೆಸ್ಸಿಗರು ತಮ್ಮ ವರ್ತನೆಗೆ ಬೇಷರತ್ ಕ್ಷಮೆ ಕೇಳಲಿ ಎಂದು ಬಿಜೆಪಿಗರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸಿದ್ದಾರೆ. ಚನ್ನಮ್ಮ ವೃತ್ತದಿಂದ ಕಾಂಗ್ರೆಸ್ ಕಚೇರಿಗೆ ವರೆಗೂ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಚೇರಿಗೆ ನುಗ್ಗಲು ಹೊರಟ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಇದನ್ನೂ ಓದಿ: ಗೃಹ ಸಚಿವರ ತವರಲ್ಲಿ ಅಸ್ಪೃಶ್ಯತೆ ಜೀವಂತ – ದೇವರು ಬಂದಂತೆ ನಾಟಕವಾಡಿ ದಲಿತರನ್ನ ದೇವಾಲಯದಿಂದ ಹೊರಕಳಿಸಿದ ಗ್ರಾಮಸ್ಥ
ಹುಬ್ಬಳ್ಳಿಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಯಲ್ಲಿ ಹೈಡ್ರಾಮಾ ನಡೆಯಿತು. ಕಾರವಾರ ರಸ್ತೆಯಲ್ಲಿನ ಕಾಂಗ್ರೆಸ್ ಜಿಲ್ಲಾಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಅದೇ ರೀತಿ ಬಳ್ಳಾರಿಯ ರಾಯಲ್ ಸರ್ಕಲ್‌ನಲ್ಲಿ ಬಿಜೆಪಿಗರು ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪತಿ ಸಾವಿನ ಬಳಿಕ ಪೇದೆ ಕಾಟ, ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ – ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ

