ನವದೆಹಲಿ: ದೆಹಲಿಯಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯನ್ನು ಅಡ್ಡಿಪಡಿಸಿದ್ದಕ್ಕಾಗಿ ಯುವ ಕಾಂಗ್ರೆಸ್ ವಿರುದ್ಧ ದೇಶಾದ್ಯಂತ ಬಿಜೆಪಿ ಕಾರ್ಯಕರ್ತ ಸಿಡಿದೆದ್ದಿದ್ದಾರೆ. ದೆಹಲಿ, ಸೂರತ್, ಮುಲುಂಡ್ ಮತ್ತು ಹೈದರಾಬಾದ್ ಸೇರಿದಂತೆ ಇತರ ಕಡೆಗಳಲ್ಲಿ ಬಿಜೆಪಿ ಪ್ರತಿಭಟನೆಗಳು ನಡೆಯುತ್ತಿವೆ.
ಮಹಾರಾಷ್ಟ್ರದ ಮುಲುಂಡ್‌ನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರೊಬ್ಬರು ತಮ್ಮ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಹೊಸ ಶ್ಯೂರಿಟಿ ನೀಡಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಥಾಣೆಗೆ ತೆರಳುತ್ತಿದ್ದಾಗ, ಬಿಜೆಪಿ ಕಾರ್ಯಕರ್ತರು ಅವರಿಗೆ ಕಪ್ಪು ಬಾವುಟಗಳನ್ನು ಪ್ರದರ್ಶಿಸಿ ಆಕ್ರೋಶ ಹೊರಹಾಕಿದ್ದಾರೆ. ‘ಲಷ್ಕರ್-ಎ-ರಾಹುಲ್’ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ಇದನ್ನೂ ಓದಿ: ಎಐ ಶೃಂಗದಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಲಿನಿಂದ ಒದ್ದ ವೀಕ್ಷಕರು
ನಿನ್ನೆ ದೆಹಲಿಯ ಎಐ ಶೃಂಗಸಭೆಯ ಸ್ಥಳದಲ್ಲಿರುವ ಸಭಾಂಗಣಕ್ಕೆ ಶರ್ಟ್ ಧರಿಸದ ಯುವ ಕಾಂಗ್ರೆಸ್ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ನುಗ್ಗಿದರು. ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿತ್ತು. ನಾಲ್ವರು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಭೂಪೇಂದರ್ ಯಾದವ್ ಕಿಡಿಕಾರಿದ್ದರು. ಇದು ಅವ್ಯವಸ್ಥೆ. ಕಾಂಗ್ರೆಸ್‌ಗೆ ನಾಚಿಕೆಯಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ದೆಹಲಿಯ ಕೆಂಪು ಕೋಟೆ, ಪ್ರಮುಖ ಧಾರ್ಮಿಕ ಸ್ಥಳಗಳ ಸ್ಫೋಟಕ್ಕೆ ಎಲ್‌ಇಟಿ ಸಂಚು
ಮಹಾತ್ಮ ಗಾಂಧಿಯವರ ಹತ್ಯೆಯ ಹಿಂದೆ ಸಂಘದ ಕೈವಾಡವಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದರು ಎಂದು ಆರೋಪಿಸಿ ಆರೆಸ್ಸೆಸ್ ಕಾರ್ಯಕರ್ತ ರಾಜೇಶ್ ಕುಂಟೆ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

