ಗದಗ: ಸಣ್ಣನೀರಾವರಿ ಇಲಾಖೆ (Minor Irrigation Department) ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶಾಸಕ ಚಂದ್ರು ಲಮಾಣಿಗೆ ಸೇರಿದ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆ (Balaji Hospital) ಮೇಲೆ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಶಾಸಕ ಚಂದ್ರು ಲಮಾಣಿ ಮತ್ತು ಇಬ್ಬರು ಪಿಎಗಳೂ ʻಲೋಕಾʼ ಬಲೆಗೆ ಬಿದ್ದಿದ್ದಾರೆ. ಬಳಿಕ ಕಂತೆ ಕಂತೆ ಹಣದ ಸಮೇತ ಶಾಸಕ ಚಂದ್ರು ಲಮಾಣಿ, ಅವರ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ, ಹಾಗೂ ಖಾಸಗಿ ಪಿಎ ಗುರುನಾಯ್ಕ್ ಮೂವರನ್ನ ಲೋಕಾಯುಕ್ತ (Lokayukta) ಬಂಧಿಸಿದೆ. ಇದನ್ನೂ ಓದಿ: ಕಾರಿನಲ್ಲಿ ತೆರಳುತ್ತಿದ್ದ ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

ಸಿಕ್ಕಿಬಿದ್ದಿದ್ದು ಹೇಗೆ?
ರಸ್ತೆ ಬದಿ ತಡೆಗೋಡೆ ನಿರ್ಮಾಣ ಸಂಬಂಧ 1 ಕೋಟಿ ಮೊತ್ತದ ಕಾಮಗಾರಿಗೆ ಶಾಸಕರು ಕ್ಲಾಸ್-1 ಗುತ್ತಿಗೆದಾರ (Contractor) ವಿಜಯ ಪೂಜಾರ ಎನ್ನುವವರ ಬಳಿ 11 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು ಇದರ ಮೊದಲ ಹಂತದ ಹಣವಾಗಿ 5 ಲಕ್ಷ ರೂ. ಪಡೆಯುವಾಗಲೇ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಶಾಸಕರು ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಸದ್ಯ ಶಾಸಕ ಚಂದ್ರು ಲಮಾಣಿ ಸೇರಿ ಮೂವರನ್ನ ಬಂಧಿಸಿರುವ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ವಿಚಾರಣೆಗೆ ತಯಾರಿ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ ವಿರುದ್ಧ ಬಿಜೆಪಿ ಸಮರ – ದೇಶಾದ್ಯಂತ ಪ್ರತಿಭಟನೆ

