ಚಿಕ್ಕಮಗಳೂರು: ಆಲ್ದೂರು (Aldur) ಪೊಲೀಸ್ಠಾ (Police) ಣೆ ವ್ಯಾಪ್ತಿಯ ಹೋಂ ಸ್ಟೇಯೊಂದರಲ್ಲಿ (Homestay) ಯುವತಿ ಅನುಮಾನಾಸ್ಪದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 4 ತಿಂಗಳ ಬಳಿಕ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಯುವತಿ ರಂಜಿತಾ 2025ರ ಅಕ್ಟೋಬರ್ 25ರಂದು ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದಿದ್ದಳು. ಅದೇ ದಿನ ಹೋಂ ಸ್ಟೇ ಬಾತ್‍ರೂಮ್‍ನಲ್ಲಿ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಳು. ಇದನ್ನೂ ಓದಿ: ಹೋಂ ಸ್ಟೇ ಬಾತ್ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು
ಮರಣೋತ್ತರ ಪರೀಕ್ಷೆಯಲ್ಲಿ ಯುವತಿ ಸಾವಿನ ಸತ್ಯಾಂಶ ಬಹಿರಂಗವಾಗಿದೆ. ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮೋನಾಕ್ಸೈಡ್ ಅನಿಲ ಸೋರಿಕೆಯಿಂದ ಸಾವು ದೃಢಪಟ್ಟಿದೆ. ಈ ಹಿನ್ನೆಲೆ ಸರಿಯಾದ ವೆಂಟಿಲೇಶನ್ ವ್ಯವಸ್ಥೆ ಇಲ್ಲದಿದ್ದದ್ದೇ ದುರಂತಕ್ಕೆ ಕಾರಣ ಎಂದು ಹೋಂ ಸ್ಟೇ ಮಾಲೀಕ ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಹೋಂ ಸ್ಟೇ ಮಾಲೀಕರ ನಿರ್ಲಕ್ಷ್ಯವೇ ಯುವತಿಯ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಆಲ್ದೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕೂಲಿ ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿ – ಮಗು ಸೇರಿ ನಾಲ್ವರು ದುರ್ಮರಣ

