– ಸುರೇಶ್ ಗೌಡ ಕೈಗೆ ಪೆಟ್ಟು, ಚಾಲಕನಿಗೂ ಗಾಯ
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ ಮಂಡ್ಯದ (Mandya) ಬೊಂತೆಕೊಪ್ಪಲು (Bonthekoppalu) ಸಮೀಪ ಶನಿವಾರ ರಾತ್ರಿ ನಡೆದಿದೆ.
ಕಾರ್ಯಕರ್ತರ ಮದುವೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಭಾಗಶಃ ಜಖಂಗೊಂಡಿದೆ. ಅಪಘಾತದಲ್ಲಿ ಸುರೇಶ್ ಗೌಡರ ಕೈಗೆ ಪೆಟ್ಟು ಬಿದ್ದಿದ್ದು, ಚಾಲಕನಿಗೂ ಗಾಯಗಳಾಗಿವೆ. ಇದನ್ನೂ ಓದಿ: ಅಫ್ಘಾನ್ ಮೇಲೆ ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ – 12 ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸಾವು

ಕಾರು ಪಲ್ಟಿಯಾದ ತಕ್ಷಣ ಸುರೇಶ್ ಗೌಡ ಅವರ ಗನ್‌ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸುರೇಶ್ ಗೌಡರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರನ್ನೂ ಮೊದಲು ಮಂಡ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಉನ್ನತ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪೋಕ್ಸೊ ಕೇಸ್ ದಾಖಲು

