ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಟ್ರ್ಯಾಪ್ ಆದ ಪ್ರಕರಣದಲ್ಲಿ ಬಿಜೆಪಿ ಶಾಸಕ ಚಂದ್ರು ಲಮಾಣಿ (Chandru Lamani) ಅವರಿಗೆ ಮಾ.2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಗುತ್ತಿಗೆದಾರನಿಂದ ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಚಂದ್ರು ಲಮಾಣಿ ಅವರನ್ನು ಬಂಧಿಸಿ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು. ಇದನ್ನೂ ಓದಿ: ಚಂದ್ರು ಲಮಾಣಿ & ಗುತ್ತಿಗೆದಾರ ನಡುವಿನ ಆಡಿಯೋ ಸ್ಫೋಟ
ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸಂತೋಷ್ ಗಜಾನನ ಭಟ್, ಬಿಜೆಪಿ ಶಾಸಕರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಕ್ಷೇತ್ರದ ಸುಂಕದಾಳ ಗ್ರಾಮ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚೆಕ್ ಡ್ಯಾಂ ನಿರ್ಮಾಣ ಹಾಗೂ ತಡೆಗೋಡೆ ಕಾಮಗಾರಿಗೆ 1 ಕೋಟಿ ರೂ. ಮಂಜೂರಾಗಿತ್ತು. ಗುತ್ತಿಗೆದಾರ ಕಾಮಗಾರಿ ಮುಂದುವರಿಸಬೇಕಾದರೆ 11 ಲಕ್ಷ ರೂ. ಕಮಿಷನ್ ನೀಡಬೇಕೆಂದು ಶಾಸಕ ಲಮಾಣಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಡಾ.ಚಂದ್ರು ಲಮಾಣಿ – ಬಿಜೆಪಿಗೆ ನುಂಗಲಾರದ ತುತ್ತು

