Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಪ್ರಿಲ್ ಅಂತ್ಯಕ್ಕೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಏಪ್ರಿಲ್ ಅಂತ್ಯಕ್ಕೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

Bengaluru City

ಏಪ್ರಿಲ್ ಅಂತ್ಯಕ್ಕೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

Public TV
Last updated: February 22, 2026 3:40 pm
Public TV
Share
3 Min Read
DK Shivakumar 1 1
SHARE

– ಬೆಂಗಳೂರು ರಸ್ತೆ ಅಭಿವೃದ್ಧಿಗೆ 5,065 ಕೋಟಿ ವೆಚ್ಚ
– ನಗರದಲ್ಲಿ ಗುತ್ತಿಗೆದಾರರ ಬಿಲ್ ಸಮಸ್ಯೆ ಇಲ್ಲ

ಬೆಂಗಳೂರು: ನಗರದ ರಸ್ತೆ ಅಭಿವೃದ್ಧಿಗೆ (Road Development) 5,065 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲಾ ರಸ್ತೆಗಳ ಬ್ಲ್ಯಾಕ್‌ ಟಾಪಿಂಗ್ ಹಾಗೂ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು.

ಜಿಬಿಎ ಕಚೇರಿಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಅವರು ಮಾಧ್ಯಮಗಳನ್ನ ಉದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ದಾವಣಗೆರೆ | ಓವರ್‌ ಡೋಸ್‌ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

Bengaluru 1

ಇಂದಿನ ಸಭೆಯಲ್ಲಿ ಜಿಬಿಎ (GBA) ಚಿಹ್ನೆಯನ್ನ ಅಂತಿಮಗೊಳಿಸಲಾಗಿದ್ದು, ಆಯುಕ್ತರು ಅದನ್ನು ಬಿಡುಗಡೆ ಮಾಡಲಿದ್ದಾರೆ. ಇನ್ನು ಬೆಂಗಳೂರು ದಕ್ಷಿಣ ಪಾಲಿಕೆಯಲ್ಲಿ ಮಾದರಿ ಕಟ್ಟಡ ಅಂತಿಮಗೊಳಿಸಿದ್ದೇವೆ. ಆದಷ್ಟು ಬೇಗ ಟೆಂಡರ್ ಕರೆದು ಗುದ್ದಲಿ ಪೂಜೆ ಮಾಡಿ ಕೆಲಸ ಆರಂಭಿಸಬೇಕು ಎಂದು ಸೂಚಿಸಿದ್ದೇನೆ. ಯಾವ ಶಾಸಕರು, ಮಂತ್ರಿ ಬರಲಿ ಎಂದು ಕಾಯಬೇಡಿ, ನಿಮ್ಮ ಪಾಡಿಗೆ ನಿಮ್ಮ ಕೆಲಸ ಆರಂಭಿಸಿ, ಆಮೇಲೆ ಅವರನ್ನ ಕರೆದುಕೊಂಡು ಹೋಗಿ ಪೂಜೆ ಮಾಡಿಸಿ ಎಂದು ಹೇಳಿದ್ದೇನೆ. ಪ್ರತಿನಿತ್ಯ ಕಾಮಗಾರಿ ಪ್ರಗತಿ ಫೋಟೋ ಸಮೇತ ಮಾಹಿತಿ ರವಾನಿಸಬೇಕು ಎಂದು ಸೂಚಿಸಿದ್ದು, ಅಧಿಕಾರಿಗಳಿಗೆ ಹೊಣೆಗಾರಿಕೆ ನಿಗದಿಪಡಿಸಿದ್ದೇನೆ ಎಂದು ಮಾಹಿತಿ ನೀಡಿದರು.

3 ತಿಂಗಳಲ್ಲಿ ರಸ್ತೆ ಅಭಿವೃದ್ಧಿಗೆ 2,671 ಕೋಟಿ ಅನುದಾನ
2 ಪ್ಯಾಕೇಜ್‌ಗಳಲ್ಲಿ ಹೊರ ವರ್ತುಲ ರಸ್ತೆಗೆ 420 ಕೋಟಿ ರೂ., ವಾರ್ಡ್ ರಸ್ತೆಗಳಿಗೆ 82 ಪ್ಯಾಕೇಜ್ ಗಳಲ್ಲಿ 1,000 ಕೋಟಿ ರೂ., ಕರ್ನಾಟಕ ಸರ್ಕಾರದ ಅನುದಾನದ 81 ಪ್ಯಾಕೇಜ್ ಗಳಲ್ಲಿ 1,241 ಕೋಟಿ ರೂ. ಸೇರಿದಂತೆ 2,671 ಕೋಟಿ ರೂ. ಮೊತ್ತದ ರಸ್ತೆ ಅಭಿವೃದ್ಧಿ ಕೆಲಸ ಪ್ರಾರಂಭವಾಗಿದೆ. ಈ ಕಾಮಗಾರಿ ಕೆಲಸಗಳು ತ್ವರಿತವಾಗಿ ಮಾಡಬೇಕು, ಮಳೆ ಆರಂಭವಾಗುವ ಮುನ್ನ ಎಲ್ಲಾ ಕೆಲಸ ಮುಗಿಸಬೇಕು ಎಂದು ಸೂಚಿಸಿದ್ದೇನೆ ಎಂದರು.

Greater Bengaluru

ಕಳೆದ 3 ತಿಂಗಳಲ್ಲಿ ಈ 2,671 ಕೋಟಿ ರೂ. ಅನುದಾನ ನೀಡಲಾಗಿದ್ದು, 80% ಟೆಂಡರ್ ಕರೆಯಲಾಗಿದೆ. ಕಳೆದ ವರ್ಷ 389 ಕಿಮೀ ರಸ್ತೆಗಳ ಬ್ಲ್ಯಾಕ್ ಟಾಪಿಂಗ್ ಗೆ 694 ಕೋಟಿ ರೂ. ಹಾಗೂ ವೈಟ್ ಟಾಪಿಂಗ್ ಗೆ 1‌,700 ಕೋಟಿ ರೂ. ಸೇರಿ 2,394 ಕೋಟಿ ರೂ. ವೆಚ್ಚ ಮಾಡಲಾಗಿದೆ. ವಿಶ್ವ ಬ್ಯಾಂಕ್ ನಿಂದ ಕೆನಾಲ್ ಲಿಂಕ್ ಲೈನಿಂಗ್ ಕೆಲಸಕ್ಕೆ 1,600 ಕೋಟಿ ರೂ. ಟೆಂಡರ್ ಕರೆದು ಕೆಲಸ ಆರಂಭವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕಾಡಾನೆ ದಾಳಿಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಬೆಂಗಳೂರಿನಲ್ಲಿ ಗುತ್ತಿಗೆದಾರರ ಬಿಲ್ ಸಮಸ್ಯೆ ಇಲ್ಲ
ಇನ್ನೂ ಗುತ್ತಿಗೆದಾರರು ಬಾಕಿ ಬಿಲ್‌ ಪಾವತಿ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ. ಏಪ್ರಿಲ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವುದೇ ಎಂದು ಕೇಳಿದಾಗ, ಪಾಲಿಕೆಗಳಲ್ಲಿ ಕ್ರಾಂತಿಕಾರಿ ತೀರ್ಮಾನ ಮಾಡಿ ಬಿಲ್ ವಿತರಣೆ ಮಾಡುತ್ತಿದ್ದೇವೆ. ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಆ ಸಮಸ್ಯೆ ಇಲ್ಲ. ಬೇರೆ ಕಡೆ ಕಾಮಗಾರಿಗಳ ಗುತ್ತಿಗೆದಾರರು ಈ ರೀತಿ ಕೇಳುತ್ತಿರಬಹುದು. ನಾವು ಸಮಸ್ಯೆ ಆದಷ್ಟು ಬಗೆಹರಿಸಿದ್ದೇವೆ. ಸುಮಾರು 90% ಸಮಸ್ಯೆ ಬಗೆಹರಿಸಿದ್ದು, ತಾಂತ್ರಿಕ ಕಾರಣಗಳಿಂದಾಗಿ 10% ಮಾತ್ರ ಬಾಕಿ ಉಳಿದಿವೆ. ಬೆಂಗಳೂರು ರಸ್ತೆ ಕಾಮಗಾರಿ ವಿಚಾರದಲ್ಲಿ ಯಾವ ಗುತ್ತಿಗೆದಾರರ ಬಿಲ್ ಬಾಕಿ ಇಲ್ಲ ಎಂದು ತಿಳಿಸಿದರು.

ಇದೇ ವೇಳೆ ಪಾಲಿಕೆ ಚುನಾವಣೆ ಬಗ್ಗೆ ಮಾತನಾಡಿ, ಚುನಾವಣೆಗೆ ಸಿದ್ಧತೆ ನಡೆಯುತ್ತಿದೆ. ಇದನ್ನ ರಾಜ್ಯ ಚುನಾವಣಾ ಆಯೋಗದ ಜವಾಬ್ದಾರಿಗೆ ಬಿಟ್ಟಿದ್ದು, ಕೋರ್ಟ್ ನಲ್ಲಿ ಅವರೇ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಚುನಾವಣೆ, ಆಯೋಗದ ಕೈಯಲ್ಲಿದೆ, ನಮ್ಮ ಕೈಯಲ್ಲಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಚೀನಾಗೆ ಭೂಮಿ ಕೊಟ್ಟಾಗ ದೇಶದ ಮರ್ಯಾದೆ ಹಾಳಾಗ್ಲಿಲ್ವಾ? – ಎಲ್ಲದಕ್ಕೂ ರಾಹುಲ್ ಗಾಂಧಿನೇ ಹೊಣೆನಾ? – ಪ್ರಿಯಾಂಕ್‌ ಖರ್ಗೆ ಪ್ರಶ್ನೆ

TAGGED:bengalurucontractorsDK ShivakumarRoad Developmentಗುತ್ತಿಗೆದಾರರುಡಿಕೆ ಶಿವಕುಮಾರ್ಬೆಂಗಳೂರುರಸ್ತೆ ಅಭಿವೃದ್ಧಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
8 minutes ago
H D Kumaraswamy
Bengaluru City

ನಿಮಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯಕಾರ ಪೋಷಾಕು ಎಲ್ಲವೂ ದೇವೇಗೌಡರ ದೇಣಿಗೆ: ಸಿಎಂಗೆ ಹೆಚ್‌ಡಿಕೆ ತಿರುಗೇಟು

Public TV
By Public TV
10 minutes ago
Will Jacks
Cricket

ತವರಿನಲ್ಲೇ ಲಂಕಾ ದಹನ – ಇಂಗ್ಲೆಂಡ್‌ಗೆ ʻವಿಲ್‌ʼ ಪವರ್‌, 51 ರನ್‌ಗಳ ಭರ್ಜರಿ ಜಯ

Public TV
By Public TV
16 minutes ago
DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
57 minutes ago
Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
2 hours ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?