ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ಗಂಟೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

1 Min Read

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಸುಮಾರು 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು – ಹಲವು ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇವಸ್ಥಾನ ಬಾಗಿಲು ಓಪನ್‌

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಕೋಲಾರ, ಬೆಳಗಾವಿ, ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಎಮರ್ಜೆನ್ಸಿ ಕೋಡ್‌ ಕಳಿಸಿ ನಾಪತ್ತೆಯಾದ ಅಮೆರಿಕದ ʻಫ್ಲೆಯಿಂಗ್‌ ಗ್ಯಾಸ್‌ ಸ್ಟೇಷನ್‌ʼ

ಬೆಂಗಳೂರು ನಗರದ ಹಲವು ಕಡೆ ಈಗಾಗಲೇ ತುಂತುರು ಮಳೆ ಆರಂಭವಾಗಿದೆ. ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ವಿಧಾನಸೌಧ, ಕಾರ್ಪೋರೇಷನ್ ಸುತ್ತಮುತ್ತ ಮಳೆಯಾಗಿದೆ. ಇದನ್ನೂ ಓದಿ: ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ‘ಒಡೆಯರ್ ಎಕ್ಸ್‌ಪ್ರೆಸ್’ ನಿಲುಗಡೆಗೆ ಸಿಕ್ತು ಗ್ರೀನ್ ಸಿಗ್ನಲ್

Share This Article