Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
Last updated: February 22, 2026 11:33 pm
Public TV
Share
2 Min Read
Bagalkote 4
SHARE

– ಫೆ.26 ರಂದು ಬಾಗಲಕೋಟೆಯಲ್ಲಿ ಬೃಹತ್‌ ಪ್ರತಿಭಟನೆಗೆ ಬಿಜೆಪಿ ಕರೆ

ಬಾಗಲಕೋಟೆ: ಶಿವಾಜಿ ಜಯಂತಿಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದ ಬಾಗಲಕೋಟೆಯ ಕಿಲ್ಲಾ ಓಣಿ ಸಹಜ ಸ್ಥಿತಿಗೆ ಬಂದಿದೆ. ಕೊತ್ತಲೇಶ್ವರ ದೇವಸ್ಥಾನ ಹಾಗೂ ಪಂಕಾ ಮಸೀದಿ ಆವರಣದಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ಆರಂಭವಾಗಿದೆ. ಈ ಬೆನ್ನಲ್ಲೇ ಹಿಂದೂ ಸರ್ವ ಸಮಾಜದ ಮುಖಂಡರು ಭಾನುವಾರ (ಫೆ.22) ನಡೆಸಿದ ಸಭೆಯಲ್ಲಿ ಮತ್ತೊಮ್ಮೆ ಶಿವಾಜಿ ಜಯಂತಿ ಆಚರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.

ಬಾಗಲಕೋಟೆ ಶಿವಾನುಭವ ಚರಂತಿಮಠ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಫೆ.26 ರಂದು ಶಿವಾಜಿ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧರಿಸಲಾಗಿದೆ. ಜೊತೆಗೆ ಕಲ್ಲುತೂರಾಟ ನಡೆಸಿದ ಆರೋಪಿಗಳ ಬಂಧನಕ್ಕೂ ಆಗ್ರಹಿಸಲಾಗಿದೆ. ಇದನ್ನೂ ಓದಿ: ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Bagalkote 3

ಈ ವೇಳೆ ರಾಜ್ಯಸಭಾ ಸಂಸದ ನಾರಾಯಣ್ ಸಾ ಭಂಡಗೆ ಮಾತನಾಡಿ, ಫೆ.26 ರಂದು ಅದೇ ಮಸೀದಿ ಎದುರು ಅದ್ಧೂರಿಯಾಗಿ ಶಿವಾಜಿ ಮಹಾರಾಜರ ಜಯಂತಿ ಆಚರಿಸೋಣ. ಅಕ್ರಮ ಮಸೀದಿಗಳ ಬಗ್ಗೆ ನಮ್ಮ ಹೋರಾಟ ಮುಂದುವರಿಸೋಣ ಎಂದು ಕರೆ ನೀಡಿದರು.

ಸಹಜ ಸ್ಥಿತಿಗೆ ಮರಳಿದ್ರೂ ಮುನ್ನೆಚ್ಚರಿಕೆ
ಶಿವಾಜಿ ಜಯಂತಿಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದ ಬಾಗಲಕೋಟೆಯ ಕಿಲ್ಲಾ ಓಣಿ ಸಹಜ ಸ್ಥಿತಿಗೆ ಬಂದಿದೆ. ಆದಾಗ್ಯೂ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಈ ಮಧ್ಯೆ, ಸೋಮವಾರ (ಫೆ.23) ನಡೆಯಬೇಕಿದ್ದ ಹಿಂದೂ ಸಮ್ಮೇಳನ ಅನಿರ್ದಿಷ್ಟಾವಧಿ ಮುಂದೂಡಿಕೆ ಆಗಿದೆ.

Bagalkote 2 1

ಇನ್ನೂ ಹಿಂದೂ ಸಮ್ಮೇಳನದ ಪ್ರಮುಖ ಭಾಷಣಕಾರರಾಗಿದ್ದ ಪ್ರಮೋದ್ ಮುತಾಲಿಕ್‌ಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ ಹೇರಿದ್ರೂ ಜಿಲ್ಲೆ ಪ್ರವೇಶಿಸಿದ್ರು. ಬಾಗಲಕೋಟೆ ರೈಲು ನಿಲ್ದಾಣಕ್ಕೆ ಆಗಮಿಸಿದ ಮುತಾಲಿಕ್‌ಗೆ ನಿರ್ಬಂಧ ಇರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ರು. ಈ ವೇಳೆ ಪ್ರತಿಕ್ರಿಯಿಸಿ, ನಾನು ಮಾತನಾಡಿದ ನಂತರ ಏನಾದರೂ ತಪ್ಪು ಅನಿಸಿದರೆ ನನ್ನ ಮೇಲೆ ಕೇಸ್ ಹಾಕಿ. ಆದರೆ ನಿರ್ಬಂಧ ಹೇರಿದ್ರೆ ಹೇಗೆ ಎಂದು ಪ್ರಶ್ನಿಸಿದ್ರು. ಕಲ್ಲು ತೂರಿದವರ ವಿರುದ್ಧ ಆಕ್ರೋಶ ಹೊರ ಹಾಕಿದ್ರು.

ಫೆ.26 ರಂದು ಬೃಹತ್‌ ಪ್ರತಿಭಟನೆಗೆ ಬಿಜೆಪಿ ಕರೆ
ಇನ್ನೂ ಕಲ್ಲು ತೂರಾಟ ಹಾಗೂ ಚಪ್ಪಲಿ ಎಸೆತ ಪ್ರಕರಣ ಖಂಡಿಸಿ ಫೆ.26 ರಂದು ಬಾಗಲಕೋಟೆ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ಮುಖಂಡ ಅಶೋಕ ಲಿಂಬಾವಳಿ ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Bagalkote BJP

ಬಾಗಲಕೋಟೆ ನಗರದ ಚರಂತಿಮಠ ಕಲ್ಯಾಣ ಮಂಟಪದಲ್ಲಿ ನಡೆದ ಸರ್ವ ಹಿಂದೂ ಸಮಾಜದ ಮುಖಂಡರ ಸಭೆ ಬಳಿಕ ತೀರ್ಮಾನ ತೆಗೆಕೊಂಡಿದ್ದಾಗಿ ತಿಳಿಸಿದ್ದಾರೆ. ಫೆಬ್ರುವರಿ 26 ರಂದು ಬಾಗಲಕೋಟೆ ನಗರದ ಅಂಬಾಭವಾನಿ ದೇವಸ್ಥಾನದಿಂದ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಭಟನೆಗೆ ಹಿಂದೂ ಜಾಗರಣ ವೇದಿಕೆ ರಾಜ್ಯ ಸಂಚಾಲಕರಾದ ಜಗದೀಶ್ ಕಾರಂತ್ ಅವ್ರನ್ನ ಕರೆಸಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರತಿಭಟನೆಗೆ ಜಿಲ್ಲೆಯ ಹಳ್ಳಿಹಳ್ಳಿಗಳಿಂದ ಹಿಂದೂ ಕಾರ್ಯಕರ್ತರು ಆಗಮಿಸಲಿದ್ದಾರೆ.

TAGGED:bagalkoteRB TimmapurStone peltingಕಲ್ಲು ತೂರಾಟಬಾಗಲಕೋಟೆಮುಸ್ಲಿಮ್ಹಿಂದೂ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
20 seconds ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
11 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
31 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
39 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
52 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?