ನಟ ಚೇತನ್ ಅಹಿಂಸಾ ವಿರುದ್ಧ ಎಫ್‌ಐಆರ್‌

2 Min Read

ಬೆಂಗಳೂರು: ಡಾ.ರಾಜ್‌ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ (Chetan Ahimsa) ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ.

ಇತ್ತೀಚಿಗಷ್ಟೇ ನಟ ಚೇತನ್‌ ಶೇಷಾದ್ರಿಪುರಂ ಪೊಲೀಸ್‌ ಠಾಣೆಯಲ್ಲಿ ಹಿರಿಯ ನಿರ್ಮಾಪಕ ಸಾರಾ ಗೋವಿಂದು ವಿರುದ್ಧ ದೂರು ನೀಡಿದ್ದರು. ದೂರಿನನ್ವಯ ಎಫ್‌ಐಆರ್‌ ಕೂಡ ದಾಖಲಾಗಿತ್ತು. ಇದೀಗ ಸಾರಾ ಗೋವಿಂದು ಅವರು ಕೂಡ ನಟ ಚೇತನ್‌ ವಿರುದ್ಧ ದಾಖಲಿಸಿದ್ದು, ದೂರಿನನ್ವಯ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಈಗಾಗಲೇ ಇಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ವಿಡಿಯೋ ಸಂಗ್ರಹಿಸಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಸಾಕ್ಷಿ ಕಲೆ ಹಾಕಿದ ನಂತರ ನೋಟಿಸ್ ನೀಡಲು ಪೊಲೀಸರು ಚಿಂತಿಸಿದ್ದು, ಬಳಿಕ ಹೇಳಿಕೆ ದಾಖಲು ಮಾಡಿಕೊಳ್ಳಲಿದ್ದಾರೆ. ಇದನ್ನೂ ಓದಿ: ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ

ವಿವಾದ ಏನು?
ಏ.24ರಂದು ಡಾ.ರಾಜ್‌ಕುಮಾರ್ ಹುಟ್ಟುಹಬ್ಬದ ದಿನ ರಾತ್ರಿ ನಟ ಚೇತನ್ ಅಹಿಂಸಾ ರಾಜ್‌ಕುಮಾರ್ ಸಮಾಧಿ ಬಗ್ಗೆ ಪೋಸ್ಟ್ ಹಾಕಿದ್ದರು. ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿನಾ? ಅಂತ ಪ್ರಶ್ನೆ ಮಾಡಿದ್ದರು. 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಎಂದು ಪೋಸ್ಟ್ ಮಾಡಿದ್ದರು. ಇದರ ಬೆನ್ನಲ್ಲೇ ರಾಜ್ ಅಭಿಮಾನಿಗಳು ಚೇತನ್ ವಿರುದ್ಧ ಆಕ್ರೋಶ ಹೊರಹಾಕಿದ್ದರು.

Share This Article