Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
Last updated: February 23, 2026 1:11 pm
Public TV
Share
2 Min Read
MB Patil 3
SHARE

ಬೆಂಗಳೂರು: ಅಮೆಜಾನ್ ಕಂಪನಿಯು ಇಲ್ಲಿನ ಯಲಹಂಕ ಸಮೀಪದ ವಿನಾಯಕ ನಗರದಲ್ಲಿ ನಿರ್ಮಿಸಿರುವ 11 ಲಕ್ಷ ಚದರ ಅಡಿ ವಿಸ್ತಾರದ ಸುಸಜ್ಜಿತ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ಅವರಿಂದು (ಫೆ.23) ಉದ್ಘಾಟಿಸಿದರು.

MB Patil 1 1

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದು ರಾಜ್ಯದಲ್ಲಿ ಅಮೆಜಾನ್ ಕಂಪನಿಯ (Amazon Company) 10ನೆಯ ಕಾರ್ಪೊರೇಟ್ ಕಚೇರಿಯಾಗಿದೆ. ರಾಜ್ಯದೊಂದಿಗೆ ಎರಡು ದಶಕಗಳ ಬಾಂಧವ್ಯ ಹೊಂದಿರುವ ಕಂಪನಿಯು ಮುಂದಿನ ನಾಲ್ಕು ವರ್ಷಗಳಲ್ಲಿ ಭಾರತದಲ್ಲಿ 35 ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆ ಮಾಡಲಿದೆ. ಇದರಿಂದ 15 ಮಿಲಿಯನ್ ಸಣ್ಣ ಉದ್ಯಮಗಳಿಗೆ ನೆರವು ಸಿಗಲಿದ್ದು, ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರಲ್ಲಿ ರಾಜ್ಯಕ್ಕೆ ಗಮನಾರ್ಹ ಪಾಲು ಹರಿದು ಬರಲಿದೆ ಎಂದಿದ್ದಾರೆ. ಇದನ್ನೂ ಓದಿ: ‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

ರಾಜ್ಯವು 3.80 ಲಕ್ಷ ರೂ.ಗಳಿಗಿಂತ ಹೆಚ್ಚು ತಲಾ ಆದಾಯ ಹೊಂದಿದ್ದು, ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ಜೊತೆಗೆ, ದೇಶದ ಬೊಕ್ಕಸಕ್ಕೆ ವಾರ್ಷಿಕ 1.6 ಲಕ್ಷ ಕೋಟಿ ರೂ. ಜಿ.ಎಸ್.ಟಿ ಪಾವತಿ ಮೂಲಕ ದ್ವಿತೀಯ ಸ್ಥಾನದಲ್ಲಿದ್ದೇವೆ. ಜಾಗತಿಕ ನಾವೀನ್ಯತಾ ಸೂಚ್ಯಂಕದಲ್ಲಿ ಬೆಂಗಳೂರು ಜಾಗತಿಕ ಸ್ತರದಲ್ಲಿ 21ನೇ ಸ್ಥಾನಕ್ಕೆ ಜಿಗಿದಿದೆ. ಟೆಕ್-ಸಿಟಿ ಸೂಚ್ಯಂಕದಲ್ಲಿ ಮೊದಲ 30 ಸ್ಥಾನಗಳ ಒಳಗೆ ಕಾಣಿಸಿಕೊಂಡಿರುವ ದೇಶದ ಏಕೈಕ ನಗರ ಬೆಂಗಳೂರಾಗಿದೆ. ಕಳೆದ ವರ್ಷ ಬೆಂಗಳೂರಿನಲ್ಲಿ 14.6 ಮಿಲಿಯನ್ ಚದರ ಅಡಿ ಜಾಗವನ್ನು ಕೈಗಾರಿಕಾ ವಹಿವಾಟು ಉದ್ದೇಶಕ್ಕೆ ಭೋಗ್ಯಕ್ಕೆ ನೀಡಿದ್ದು, ನಾವು ಪ್ರಥಮ ಸ್ಥಾನದಲ್ಲಿದ್ದೇವೆ ಎಂದು ವಿವರಿಸಿದ್ದಾರೆ.

MB Patil 2

ದೇಶದಲ್ಲಿ ಒಟ್ಟು 900 ಜಿಸಿಸಿ ಕೇಂದ್ರಗಳಿದ್ದು, ಇವುಗಳ ಪೈಕಿ ಶೇ.35ರಷ್ಟು ಕರ್ನಾಟಕದಲ್ಲೇ ಇವೆ. ಇ-ಕಾಮರ್ಸ್ ವಹಿವಾಟಿಗೆ ಬೇಕಾದ ಮೂಲಸೌಕರ್ಯದಲ್ಲೂ ರಾಜ್ಯವು ಮೊದಲ ಸ್ಥಾನದಲ್ಲಿದೆ. ನಮ್ಮಲ್ಲಿ 42.48 ಲಕ್ಷ ಟನ್ ದಾಸ್ತಾನು ಸಂಗ್ರಹಿಸುವಷ್ಟು ಉಗ್ರಾಣಗಳು ಮತ್ತು 233 ಶೀತಲಗೃಹಗಳಿವೆ. ಇದಕ್ಕೆ ತಕ್ಕಂತೆ ಇ-ಕಾಮರ್ಸ್ ವಹಿವಾಟು ಶೇ.11ರಷ್ಟು ಬೆಳವಣಿಗೆ ಸಾಧಿಸುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯವು ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತೆ ಸರಕು ಸಾಗಣೆಗೆ ಪ್ರತ್ಯೇಕ ರೈಲು ಕಾರಿಡಾರ್, ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ಪಾರ್ಕುಗಳ ಅಭಿವೃದ್ಧಿ, ಡ್ರೈಪೋರ್ಟ್ ನಿರ್ಮಾಣ ಮತ್ತು ಟ್ರಕ್ ಟರ್ಮಿನಲ್ಲುಗಳ ನಿರ್ಮಾಣವನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಂಡಿದೆ. ಅಮೆಜಾನ್ ಮತ್ತು ಜಾಗತಿಕ ಮಟ್ಟದ ಇತರ ಕಂಪನಿಗಳು ರಾಜ್ಯದಲ್ಲಿರುವ ಈ ಕೈಗಾರಿಕಾ ಸ್ನೇಹಿ ಕಾರ್ಯಪರಿಸರದ ಲಾಭವನ್ನು ಪಡೆದುಕೊಳ್ಳಲು ನಮ್ಮಲ್ಲಿ ಹೆಚ್ಚು ಹೆಚ್ಚು ಹೂಡಿಕೆ ಮಾಡಬೇಕು. ಜೊತೆಗೆ ಇಲ್ಲೇ ಉತ್ಪಾದನೆ ಮಾಡಿ, ಜಗತ್ತಿನ ಉಳಿದ ಭಾಗಗಳಿಗೆ ಇಲ್ಲಿಂದ ರಫ್ತು ಮಾಡಬೇಕು ಎಂದು ಪ್ರತಿಪಾದಿಸಿದ್ದಾರೆ.

MB Patil 1

ಕಾರ್ಯಕ್ರಮದಲ್ಲಿ ಅಮೆಜಾನ್ ಕಂಪನಿಯ ಜಾಗತಿಕ ವ್ಯವಹಾರಗಳ ವಿಭಾಗದ ಮುಖ್ಯಸ್ಥ ಡೇವಿಡ್ ಝಪೊಲೋಸ್ಕಿ, ಉಪಾಧ್ಯಕ್ಷ ಚೇತನ್ ಕೃಷ್ಣಸ್ವಾಮಿ, ಮತ್ತೋರ್ವ ಉಪಾಧ್ಯಕ್ಷ ಸಮೀರ್ ಕುಮಾರ್, ಜಾಗತಿಕ ಆಸ್ತಿಪಾಸ್ತಿಗಳ ವಿಭಾಗದ ಉಪಾಧ್ಯಕ್ಷ ಸೀನ್ ಲೀ ಮುಂತಾದವರು ಉಪಸ್ಥಿತರಿದ್ದರು.ಇದನ್ನೂ ಓದಿ: ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

TAGGED:amazonbengaluruCorporate OfficeMB Patilಅಮೆಜಾನ್ಎಂ.ಬಿ.ಪಾಟೀಲ್ಕಾರ್ಪೊರೇಟ್ ಕಚೇರಿಬೆಂಗಳೂರುಯಲಹಂಕ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
34 seconds ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
15 minutes ago
Donald Trump 1
Latest

ನಾಳೆಯಿಂದ ಸುಂಕ ಸಂಗ್ರಹ ನಿಲ್ಲಿಸಲಿದೆ ಅಮೆರಿಕ – 175 ಶತಕೋಟಿ ಡಾಲರ್‌ ನಷ್ಟದ ಆತಂಕ

Public TV
By Public TV
16 minutes ago
BJP Leader Sukhbir Singh Jaunapuria
Latest

‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

Public TV
By Public TV
42 minutes ago
Weather
Bagalkot

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

Public TV
By Public TV
1 hour ago
T20 Team India
Cricket

Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್‌ ಹಾದಿ ತುಂಬಾ ಕಠಿಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?