ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಗುರುವೈಭವೋತ್ಸವ ಸಂಭ್ರಮ ಮನೆ ಮಾಡಿದ್ದು, ತಿರುಮಲ ತಿರುಪತಿ ದೇವಸ್ಥಾನದಿಂದ ಮಂತ್ರಾಲಯಕ್ಕೆ ಬಂದ ಶ್ರೀನಿವಾಸ ದೇವರ ಶೇಷವಸ್ತ್ರವನ್ನ ರಾಯರಿಗೆ ಸಮರ್ಪಿಸಲಾಯಿತು. ಈ ವೇಳೆ ಹೆಚ್‌ಡಿಕೆ (HD Kumaraswamy) ದಂಪತಿ ಭಾಗಿಯಾಗಿದ್ದರು.
ಶೇಷ ವಸ್ತ್ರವನ್ನ ತಂದ ತಿರುಮಲ ತಿರುಪತಿ ದೇವಸ್ಥಾನದ ಅಧಿಕಾರಿಗಳನ್ನ ಸಾಂಪ್ರದಾಯಿಕವಾಗಿ ರಾಯರ ಮಠದ ಆಡಳಿತ ಮಂಡಳಿ ಸ್ವಾಗತಿಸಿತು. ಮೆರವಣಿಗೆಯಲ್ಲಿ ಮಠಕ್ಕೆ ತಂದ ಶೇಷವಸ್ತ್ರವನ್ನ ರಾಯರ ಮೂಲ ಬೃಂದಾವನಕ್ಕೆ ಸಮರ್ಪಣೆ ಮಾಡಲಾಯಿತು. ಇದನ್ನೂ ಓದಿ: ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು
ಮಂತ್ರಾಲಯ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಶೇಷವಸ್ತ್ರವನ್ನ ರಾಯರ ಬೃಂದಾವನಕ್ಕೆ ಸಮರ್ಪಿಸಿದರು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು. ಶೇಷವಸ್ತ್ರ ಸಮರ್ಪಣೆ ಕಾರ್ಯಕ್ರಮದಲ್ಲಿ ಹೆಚ್‌ಡಿಕೆ ದಂಪತಿ ಭಾಗಿಯಾಗಿದ್ದರು.

