Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

Districts

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

Public TV
Last updated: February 23, 2026 6:11 pm
Public TV
Share
3 Min Read
Siddaramaiah Chikkaballapura MGNREGA Programme
SHARE

ಚಿಕ್ಕಬಳ್ಳಾಪುರ: ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ (MGNREGA) ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ (Congress) ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕರೆ ನೀಡಿದರು.

ಇಂದು ಚಿಕ್ಕಬಳ್ಳಾಪುರದಲ್ಲಿ (Chikkaballapura) ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ದೇಶಾದ್ಯಂತ ‘ಮನರೇಗಾವನ್ನು ಉಳಿಸಿ’ ಅಭಿಯಾನ ಪ್ರಾರಂಭಿಸಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಭಾಜಪ ಸರ್ಕಾರ ಮನರೆಗಾವನ್ನು ರದ್ದುಪಡಿಸಿ, ವಿಬಿಜಿರಾಮ್ ಜಿ (VB-G RAM G) ಕಾಯ್ದೆಯನ್ನು ಜಾರಿ ಮಾಡಿದೆ. ಮನರೇಗಾದ ರದ್ದು ಅಗತ್ಯವಿರಲಿಲ್ಲ. ಕೂಲಿಕಾರರು, ಆದಿವಾಸಿಗಳು, ಸಣ್ಣರೈತರಿಗೆ, ಮಹಿಳೆಯರಿಗೆ ಉದ್ಯೋಗದ ಅನುಕೂಲ ಕಲ್ಪಿಸುವ ದಿಸೆಯಲ್ಲಿ 2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ನಾಯಕಿ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಈ ಕಾಯ್ದೆ ಜಾರಿಯಾಯಿತು. ಇದೇ ಕಾಯ್ದೆಯಲ್ಲದೇ, ಶಿಕ್ಷಣ, ಆಹಾರ, ಮಾಹಿತಿ ಹಕ್ಕು ಸೇರಿದಂತೆ ಹಲವು ಜನಪರ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಆದರೆ ಈ ಎಲ್ಲ ಜನಪರ ಕಾಯ್ದೆಗಳನ್ನು ದುರ್ಬಲಗೊಳಿಸುವ ಕೆಲಸವನ್ನು ಮೋದಿಯವರ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದರು. ಇದನ್ನೂ ಓದಿ: ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

ಮನರೇಗಾ ಅಡಿ 12.16 ಕೋಟಿ ಜನರಿಗೆ ಉದ್ಯೋಗ:
ಸದನದಲ್ಲಿ ಕೇವಲ 8 ಗಂಟೆಗಳ ಕಾಲ ಚರ್ಚೆ ಮಾಡಿದ ಕೇಂದ್ರ ಸರ್ಕಾರ, ನಂತರ ಹೊಸ ಕಾಯ್ದೆಯನ್ನು ಜಾರಿಗೆ ತಂದರು. ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಜೀವಿಕ ಮಿಷನ್ ಗ್ರಾಮೀಣ ಕಾಯ್ದೆ, 12.16 ಕೋಟಿ ಜನರು ಕೆಲಸ ಪಡೆಯುತ್ತಿದ್ದರು. ಇದರಲ್ಲಿ ಸುಮಾರು 53% ಉದ್ಯೋಗ ಪಡೆಯುತ್ತಿದ್ದರು. ಅಲ್ಲದೇ ಪರಿಶಿಷ್ಟ ಜಾತಿಯ 17% ಮತ್ತು ಪರಿಶಿಷ್ಟ ವರ್ಗದ 11% ಜನರು ಉದ್ಯೋಗ ಪಡೆಯುತ್ತಿದ್ದರು. ಈ ಎಲ್ಲಾ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Siddaramaiah

ಗ್ರಾಮಸ್ವರಾಜ್ಯ ಪರಿಕಲ್ಪನೆಗೆ ಶಕ್ತಿ ತುಂಬಿದ್ದ ಮನರೇಗಾ:
ಮನರೇಗಾ ಕಾಯ್ದೆಗೆ ಗ್ರಾಮೀಣಾಭಿವೃದ್ಧಿಯ ಕನಸು ಕಂಡಿದ್ದ ಮಹಾತ್ಮಾಗಾಂಧಿಯವರ ಹೆಸರನ್ನು ಇಡಲಾಗಿತ್ತು. ಅವರ ಗ್ರಾಮ ಸ್ವರಾಜ್ಯದ ಕಲ್ಪನೆಗೆ ಮನರೇಗಾ ಶಕ್ತಿ ತುಂಬಿತ್ತು. 100 ದಿನಗಳ ಉದ್ಯೋಗದ ಖಾತ್ರಿ ನೀಡುತ್ತಿದ್ದ ಮನರೇಗಾ ಕಾಯ್ದೆಯಡಿ, ಕೂಲಿಕಾರರು ತಮ್ಮ ಸ್ಥಳೀಯ ಮಟ್ಟದಲ್ಲಿಯೇ ಕೆಲಸ ಮಾಡಬಹುದಿತ್ತು. ಗ್ರಾಮಪಂಚಾಯತಿ ಮತ್ತು ಗ್ರಾಮಸಭೆಗಳು ನಿರ್ಧರಿಸುವ ಅಧಿಕಾರವಿತ್ತು. ಆದರೀಗ ಈ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಕೇಂದ್ರದ ಅನುದಾನ, ಅನುಮತಿ ಇಲ್ಲದೇ, ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕೆಲಸವಾಗಲು ಸಾಧ್ಯ. ಆದ್ದರಿಂದ ಮನರೇಗಾವನ್ನು ಮುಂದುವರೆಸಬೇಕೆಂಬುದು ಕಾಂಗ್ರೆಸ್ ಸರ್ಕಾರದ ಒತ್ತಾಯವಾಗಿದೆ. ಮನರೇಗಾದಲ್ಲಿ 100 ದಿನ ಭತ್ಯೆಯನ್ನು ತಪ್ಪದೇ ಕೊಡಲಾಗುತ್ತಿತ್ತು. ಹೊಸ ಕಾಯ್ದೆಯಂತೆ ಕೇಂದ್ರ 60% ಅನುದಾನ ಮತ್ತು ರಾಜ್ಯಗಳು 40% ಅನುದಾನ ಕೊಡಬೇಕಾಗಿದೆ. ರಾಜ್ಯದ ಹಿತವನ್ನು ಕಾಪಾಡುವಲ್ಲಿ ಕೇಂದ್ರ ಸೋತಿದೆ. ಅದ್ದರಿಂದ ವಿಬಿಜಿರಾಮ್ ಜಿ ರದ್ದುಪಡಿಸಿ, ಮನರೇಗಾವನ್ನು ಮರುಸ್ಥಾಪಿಸಲು ದೇಶಾದ್ಯಂತ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದೆ ಎಂದರು. ಇದನ್ನೂ ಓದಿ: ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

ಬೇಡಿಕೆ ಈಡೇರುವವರೆಗೂ ಹೋರಾಟ:
ವಿಬಿಜಿರಾಮ್ ಜಿ ಯೋಜನೆಯನ್ನು ಸಂಪೂರ್ಣವಾಗಿ ರದ್ದುಪಡಿಸಿ, ಮನರೇಗಾ ವನ್ನು ಮರು ಜಾರಿಗೊಳಿಸಬೇಕು. ಜನರ ಉದ್ಯೋಗದ ಹಕ್ಕನ್ನು ಮರುಸ್ಥಾಪಿಸಬೇಕು. ಪಂಚಾಯತ್ ಸ್ವಯಂ ಆಡಳಿತದ ಹಕ್ಕು ಮರುಸ್ಥಾಪನೆ, ದಿನಕ್ಕೆ 400 ರೂ.ಗಳ ಕನಿಷ್ಠ ವೇತನವನ್ನು ದೇಶಾದ್ಯಂತ ನೀಡಬೇಕು. ಈ ಬೇಡಿಕೆಗಳು ಈಡೇರುವವರೆಗೆ ನಮ್ಮ ಆಂದೋಲನ ನಿಲ್ಲುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

ರೈತವಿರೋಧಿ ಕಾಯ್ದೆಗಳನ್ನು ಹೋರಾಟದ ಫಲವಾಗಿ ರದ್ದುಗೊಳಿಸಲಾಯಿತು. ಅದೇ ರೀತಿಯಲ್ಲಿ ಈ ಹೋರಾಟ ನಿಲ್ಲುವುದಿಲ್ಲ. ಈ ಹೋರಾಟಕ್ಕೆ ರಾಜ್ಯದ ಜನರೆಲ್ಲರೂ ನಮ್ಮ ಜೊತೆಯಾಗಬೇಕು. ಹಳ್ಳಿಗಾಡಿನ ಜನರಿಗೆ ಅನುಕೂಲ ಕಲ್ಪಿಸುವ ಮನರೇಗಾ ಯೋಜನೆಯ ಮರುಸ್ಥಾಪಿಸುವ ಕಾಂಗ್ರೆಸ್‌ನ ಸಾರ್ಥಕ ಉದ್ದೇಶಕ್ಕೆ ಜನರು ಬೆಂಬಲಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

TAGGED:ChikkaballapuracongresssiddaramaiahVB G Ram Gಕಾಂಗ್ರೆಸ್ಚಿಕ್ಕಬಳ್ಳಾಪುರಮನರೇಗಾವಿಬಿಜಿರಾಮ್ ಜಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Ranaji Final
Cricket

ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Public TV
By Public TV
39 minutes ago
Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
1 hour ago
Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
1 hour ago
IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
2 hours ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?