ಬೆಂಗಳೂರು/ಯಾದಗಿರಿ: ಅಪ್ರಾಪ್ತೆಯ (Minor Girl) ಜೊತೆ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ (Mallikarjuna Mutya) ಅನುಚಿತ ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ.
ಶಹಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಹೀಗಾಗಿ ಮಲ್ಲಿಕಾರ್ಜುನ ಮುತ್ಯಾ ಯಾವುದೇ ಕ್ಷಣದಲ್ಲೂ ಅರೆಸ್ಟ್ ಆಗುವ ಸಾಧ್ಯತೆಗಳಿವೆ. ಇದನ್ನೂ ಓದಿ: ಬಾಲಕಿ ಜೊತೆ ಅನುಚಿತ ವರ್ತನೆ, ದೂರು ದಾಖಲು – ಮಲ್ಲಿಕಾರ್ಜುನ ಮುತ್ಯಾಗೆ ಸಂಕಷ್ಟ

ಏನಿದು ಪ್ರಕರಣ?
ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ತೊಡೆ ಮೇಲೆ ಬಾಲಕಿ ಕೂರಿಸಿಕೊಂಡು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಬಂದಿತ್ತು. ಮುತ್ಯಾನ ತೊಡೆಯ ಮೇಲೆ ಬಾಲಕಿ ಕುಳಿತುಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ ಕೋಸಂಬೆ, ಕ್ರಮ ತೆಗೆದುಕೊಳ್ಳುವಂತೆ ಯಾದಗಿರಿ ಎಸ್ಪಿಗೆ ಪತ್ರ ಬರೆದಿದ್ದರು.
ʻಪಬ್ಲಿಕ್ ಟಿವಿʼಗೆ ಪ್ರತಿಕ್ರಿಯಿಸಿದ್ದ ಶಶಿಧರ ಕೋಸಂಬೆ, ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತೆ ಜೊತೆ ಅನುಚಿತ ವರ್ತನೆ ತೋರಿದ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಯಾದಗಿರಿ ಎಸ್ಪಿಗೆ ಕ್ರಮ ತೆಗೆದುಕೊಳ್ಳಲು ಪತ್ರ ಬರೆಯಲಾಗಿತ್ತು. ಬಳಿಕ ದೂರು ದಾಖಲಾಗುತ್ತಿದ್ದಂತೆ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ದೆಹಲಿಗೆ ಇಂದ್ರಪ್ರಸ್ಥ ಹೆಸರನ್ನು ಮರುನಾಮಕರಣ ಮಾಡಿ – ಶಾಗೆ ಬಿಜೆಪಿ ಸಂಸದನಿಂದ ಪತ್ರ
ಯಾದಗಿರಿ ಜಿಲ್ಲೆಯ ಶಹಾಪುರದ ಮಹಲ್ ರೋಜಾದ ಮಲ್ಲಿಕಾರ್ಜುನ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುತ್ಯಾ ಎಂದೇ ಫೇಮಸ್ ಆಗಿದ್ದಾರೆ. ಇದನ್ನೂ ಓದಿ: ಗೋವಾ ಥಾರ್ ಅಪಘಾತ ಪ್ರಕರಣ – 19 ವರ್ಷದ ದೆಹಲಿ ಯುವಕನ ವಿರುದ್ಧ FIR

