ವಿಜಯಪುರ: ಇಲ್ಲಿ ನಾಳೆ ಜೆಡಿಎಸ್ ಪಕ್ಷದಿಂದ (JDS Party) ಜನತಾ ಸಮಾವೇಶ ನಡೆಯಲಿದೆ. ಕಿತ್ತೂರು ಕರ್ನಾಟಕ ಭಾಗದ ಜೆಡಿಎಸ್ ಬೆಳ್ಳಿಹಬ್ಬದ (JDS Silver Jubilee) ಸಮಾವೇಶ ಆಯೋಜನೆ ಮಾಡಲಾಗಿದೆ.
ಶುಕ್ರವಾರ ವಿಜಯಪುರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರದಂತೆ ಹಲವಾರು ಜೆಡಿಎಸ್ ಮುಖಂಡರು ಭಾಗಿ ಆಗಲಿದ್ದಾರೆ. ಇದನ್ನೂ ಓದಿ: ನೇಣು ಬಿಗಿದು ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಸೂಸೈಡ್

ವಿಜಯಪುರ ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್ ನಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಿಂದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿ ಆಗಲಿದ್ದಾರೆ. ಇದನ್ನೂ ಓದಿ: ಹಳೆ ವೈಷಮ್ಯಕ್ಕೆ ಕಲ್ಲಿನಿಂದ ಕಾಲು ಜಜ್ಜಿ ಹಲ್ಲೆ – 11 ಆರೋಪಿಗಳು ಅರೆಸ್ಟ್

