– ಡಿಸಿ ಕಚೇರಿ ಮುಂದೆ ಹಿಂದೂ ಸಂಘಟನೆಗಳ ಸದಸ್ಯರಿಂದ ಪ್ರತಿಭಟನೆ
ಬಾಗಲಕೋಟೆ: ಶಿವಾಜಿ ಜಯಂತಿ(Shivaji Jayanti) ಮೆರವಣಿಗೆ ವೇಳೆ ಕಲ್ಲು ತೂರಾಟಕ್ಕೆ(Stone Pelting) ಸಹಾಯ ಮಾಡಿದವರನ್ನು ಬಂಧಿಸುವಂತೆ ಆಗ್ರಹಿಸಿ ಇಂದು ಬಾಗಲಕೋಟೆಯಲ್ಲಿ (Bagalkote) ಹಿಂದೂ ಸಂಘಟನೆಗಳ(Hindu Organisation) ಸದಸ್ಯರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ (Protest) ಮಹಿಳೆಯರು ಭಾಗಿಯಾಗಿ ಪಂಕಾ ಮಸೀದಿ ಆಡಳಿತ ಮಂಡಳಿಯ ಸದಸ್ಯರನ್ನು ಬಂಧಿಸುವಂತೆ ಒತ್ತಾಯಿಸಿದರು.
ಪಂಕಾ ಮಸೀದಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು. ಪ್ರತಿಭಟನೆಗೆ ಹಳೆ ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಿ ಸಾಥ್ ಕೊಟ್ಟಿದ್ದರು. ಇದನ್ನೂ ಓದಿ: Exclusive | ಸತ್ತವರ ಖಾತೆಗೆ 79 ಕೋಟಿ ಗೃಹಲಕ್ಷ್ಮಿ ಹಣ ಜಮೆ – 2.30 ಲಕ್ಷ ಫಲಾನುಭವಿಗಳ ಅಕೌಂಟ್ ಬ್ಲಾಕ್!
ಪ್ರತಿಭಟನೆಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಬಾಗಲಕೋಟೆ ಸಂಸದ ಪಿಸಿ ಗದ್ದಿಗೌಡರ, ಹಂಸನೂರು ಮಠದ ಬಸವಾನಂದ ಸ್ವಾಮೀಜಿ ಭಾಗಿಯಾಗಿದ್ದರು. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಪೊಲೀಸ್ ಇಲಾಖೆ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಜಿಲ್ಲಾಡಳಿತಕ್ಕೆ 15 ದಿನಗಳ ಗಡುವು ನೀಡಿದ ಹಿಂದೂ ಹಿತರಕ್ಷಣಾ ಸಮಿತಿ ಮಸೀದಿ ಆಡಳಿತ ಮಂಡಳಿಯ ಸದಸ್ಯರನ್ನು ಬಂಧಿಸಬೇಕು ಎಂದು ಆಗ್ರಹಿಸಿದೆ. ಮಸೀದಿಯನ್ನ ಶೀಲ್ಡೌನ್ ಮಾಡಬೇಕು. ತಪ್ಪಿತಸ್ಥರ ವಿರುದ್ದ ಗೂಂಡಾ ಕಾಯ್ದೆ ಜಾರಿಮಾಡಬೇಕು. ನವನಗರದಲ್ಲಿ ಅಕ್ರಮವಾಗಿ ತಲೆಯೆತ್ತಿರುವ ಮಸೀದಿಗಳ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಮನವಿ ಸಲ್ಲಿಸಿದೆ.
15 ದಿನಗಳ ಒಳಗಡೆ ಈ ಬೇಡಿಕೆ ಈಡೇರದಿದ್ದರೆ ಎರಡನೇ ಹಂತದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

