– ಮೃತಪಟ್ಟಿರುವವರ ಹೆಸರಿನಲ್ಲಿ ಯೋಜನೆಗಳ ಹಣ ಪಡೆಯಲಾಗಿದೆ
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ(Guarantee Scheme) ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದರೂ ನಾವು ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದೇವೆ. ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಸ್ಪಷ್ಟಪಡಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಸಂಜೆ ಪ್ರತಿಕ್ರಿಯೆ ನೀಡಿದರು.
ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, “ಉದಾಹರಣೆಗೆ ಮೃತಪಟ್ಟಿರುವ ಕೆಲವರಿಗೆ ಗ್ಯಾರಂಟಿ ಯೋಜನೆಯ ಹಣ ಸಂದಾಯವಾಗಿದೆ. ಪಡಿತರ ಅಕ್ಕಿಯನ್ನೂ ಸಹ ಮೃತಪಟ್ಟಿರುವವರ ಹೆಸರಿನಲ್ಲಿ ಪಡೆಯಲಾಗುತ್ತಿದೆ. ಗೃಹಜ್ಯೋತಿಯಲ್ಲಿ ಈ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: Exclusive | ಸತ್ತವರ ಖಾತೆಗೆ 79 ಕೋಟಿ ಗೃಹಲಕ್ಷ್ಮಿ ಹಣ ಜಮೆ – 2.30 ಲಕ್ಷ ಫಲಾನುಭವಿಗಳ ಅಕೌಂಟ್ ಬ್ಲಾಕ್!
ಮೃತಪಟ್ಟಿರುವವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ತೆಗೆದುಕೊಳ್ಳಲಾಗಿದೆ. ಈ ರೀತಿ ದುರುಪಯೋಗವಾಗುವುದನ್ನು ತಪ್ಪಿಸಬೇಕು. ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕು ಎಂದು ಸರ್ಕಾರ ಚರ್ಚೆ ಮಾಡುತ್ತಿದೆ ಎಂದರು. ಇದನ್ನೂ ಓದಿ: ನಾಯಕತ್ವದ ಬದಲಾವಣೆ ಚರ್ಚೆ ಹೊತ್ತಲ್ಲೇ ನವೀಕರಣ ದಾಳ ಪ್ರಯೋಗಿಸಿದ ಸಿಎಂ

