Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ಯನೀತಿ ಹಗರಣ ಕೇಸ್‌ನಲ್ಲಿ ಕೇಜ್ರಿವಾಲ್‌, ಸಿಸೋಡಿಯಾ ಕಳಂಕ ಮುಕ್ತ – ಕಣ್ಣೀರಿಟ್ಟ ಮಾಜಿ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮದ್ಯನೀತಿ ಹಗರಣ ಕೇಸ್‌ನಲ್ಲಿ ಕೇಜ್ರಿವಾಲ್‌, ಸಿಸೋಡಿಯಾ ಕಳಂಕ ಮುಕ್ತ – ಕಣ್ಣೀರಿಟ್ಟ ಮಾಜಿ ಸಿಎಂ

Latest

ಮದ್ಯನೀತಿ ಹಗರಣ ಕೇಸ್‌ನಲ್ಲಿ ಕೇಜ್ರಿವಾಲ್‌, ಸಿಸೋಡಿಯಾ ಕಳಂಕ ಮುಕ್ತ – ಕಣ್ಣೀರಿಟ್ಟ ಮಾಜಿ ಸಿಎಂ

Public TV
Last updated: February 27, 2026 11:43 am
Public TV
Share
2 Min Read
Arvind Kejriwal Manish Sisodia
SHARE

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ (Delhi Excise Policy Case) ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal), ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾ ಹಾಗೂ ತೆಲಂಗಾಣದ ಎಂಎಲ್‌ಸಿ ಕೆ. ಕವಿತಾ ಕಳಂಕಮುಕ್ತರಾಗಿದ್ದಾರೆ.

ಪ್ರಮುಖ ತೀರ್ಪಿನಲ್ಲಿ ರೌಸ್ ಅವೆನ್ಯೂ ಕೋರ್ಟ್‌ (Rouse Avenue Court), ಕೇಜ್ರಿವಾಲ್, ಮನೀಶ್ ಸಿಸೋಡಿಯಾ (Manish Sisodia), ಕೆ. ಕವಿತಾ ಸೇರಿ ಎಲ್ಲಾ 23 ಆರೋಪಿಗಳನ್ನ ದೆಹಲಿ ಅಬಕಾರಿ ನೀತಿ ಪ್ರಕರಣದಿಂದ ಖುಲಾಸೆಗೊಳಿಸಿದೆ. ಅಬಕಾರಿ ನೀತಿ ರಚನೆಯಲ್ಲಿ ಕ್ರಿಮಿನಲ್ ಪಿತೂರಿಯಾಗಲಿ ಅಥವಾ ತಪ್ಪು ಮಾಡಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ವಿಶೇಷ ನ್ಯಾಯಾಧೀಶರ ಪೀಠ ಹೇಳಿದೆ.

K Kavitha

ಕೋರ್ಟ್‌ ಹೇಳಿದ್ದೇನು?
ಜಿತೇಂದ್ರ ಸಿಂಗ್ ಸಿಸೋಡಿಯಾ ಮತ್ತು ಇತರರೊಂದಿಗೆ 18ನೇ ಆರೋಪಿ ಎಂದು ಹೆಸರಿಸಲಾದ ಕೇಜ್ರಿವಾಲ್ ಅವರನ್ನ ಖುಲಾಸೆಗೊಳಿಸಲಾಗಿದೆ. ಆರೋಪಗಳಿಗೆ ಯಾವುದೇ ಅರ್ಹತೆ ಇಲ್ಲ ಎಂದಿದೆ. ಅಬಕಾರಿ ನೀತಿಯಲ್ಲಿ ಯಾವುದೇ ಪಿತೂರಿಯಾಗಲಿ ಅಥವಾ ಕ್ರಿಮಿನಲ್‌ ಉದ್ದೇಶಗಳಾಗಲಿ ಇರಲಿಲ್ಲ ಎಂದು ವಿಶೇಷ ನ್ಯಾಯಾಧೀಶರ ಪೀಠ ಹೇಳಿದೆ. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ ಕೇಸ್‌ – ದೇಶದಲ್ಲೇ ಮೊದಲ ಬಾರಿಗೆ `ಎಎಪಿ’ ಅನ್ನು ಆರೋಪಿ ಎಂದು ಹೆಸರಿಸಿದ ಇಡಿ!

ಯಾವುದೇ ಸಾಕ್ಷ್ಯಗಳಿಲ್ಲದಿದ್ದರೂ ನಾಯಕರ ವಿರುದ್ಧ ದೋಷಾರೋಪ ಹೊರಿಸಿದ್ದಕ್ಕಾಗಿ ಸಿಬಿಐ ಅನ್ನು ಕೋರ್ಟ್‌ ತೀವ್ರವಾಗಿ ಖಂಡಿಸಿದೆ. ಸಿಬಿಐ ಚಾರ್ಜ್‌ಶೀಟ್‌ ಅನೇಕ ದೋಷಗಳಿಂದ ಕೂಡಿದೆ. ಸಾಕ್ಷಿಗಳ ಹೇಳಿಕೆಗಳಿಂದ ಬೆಂಬಲಿತವಾಗಿಲ್ಲ. ಸಿಸೋಡಿಯಾ ಅವರ ವಿರುದ್ಧ ನಾಮಕಾವಸ್ಥೆಗೆ ಪ್ರಕರಣ ದಾಖಲಿಸಲಾಗಿದೆ. ಕೇಜ್ರಿವಾಲ್‌ ವಿರುದ್ಧ ಸಾಕ್ಷ್ಯಾಧಾರಗಳಿಲ್ಲದೇ ಆರೋಪ ಹೊರಿಸಲಾಗಿದೆ ಎಂದು ಕೋರ್ಟ್‌ ಸಿಬಿಐ ಅನ್ನು ತರಾಟೆಗೆ ತೆಗೆದುಕೊಂಡಿದೆ. ಬಳಿಕ 23 ಆರೋಪಿಳ ವಿರುದ್ಧದ ಆರೋಪಗಳನ್ನು ಖುಲಾಸೆಗೊಳಿಸಿದೆ.

Arvind Kejriwal

ಇನ್ನೂ ಕೋರ್ಟ್‌ ತೀರ್ಪು ಹೊರ ಬೀಳುತ್ತಿದ್ದಂತೆಯೇ ಭಾವುಕರಾದ ಅರವಿಂದ್‌ ಕೇಜ್ರಿವಾಲ್‌ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೆ.ಕವಿತಾ ಬಂಧನ – ಜಾಮೀನು ನೀಡಲು ದೆಹಲಿ ಕೋರ್ಟ್ ನಿರಾಕರಣೆ

ಇಡಿ ಚಾರ್ಜ್‌ಶೀಟ್‌ನಲ್ಲಿ ಏನಿತ್ತು?
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ 2024 ರಲ್ಲಿ ಚಾರ್ಜ್‌ ಶೀಟ್‌ ಸಲ್ಲಿಸಿತ್ತು. ಆಮ್‌ ಆದ್ಮಿ ಪಕ್ಷವನ್ನು ಆರೋಪಿ ಎಂದು ಹೆಸರಿಸಿತ್ತು.

ಮದ್ಯ ಮಾರಾಟಗಾರರರಿಗೆ ಅನುಕೂಲವಾಗಲಿ ಎಂಬ ದಿಸೆಯಲ್ಲಿ ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಸೇರಿ ಹಲವು ನಾಯಕರು ನೀತಿ ರೂಪಿಸಿದ್ದಾರೆ. ದಕ್ಷಿಣ ಭಾರತದ ಹಲವು ವ್ಯಕ್ತಿಗಳು ಇದರ ಲಾಭ ಪಡೆದಿದ್ದಾರೆ. ಲಾಭದ ಸ್ವಲ್ಪ ಮೊತ್ತವನ್ನು ಎಎಪಿಗೆ ನೀಡಲಾಗಿದೆ. ಆ ಮೊತ್ತವನ್ನು ಗೋವಾ ಚುನಾವಣೆಗೂ ಬಳಸಲಾಗಿದೆ. ಅಲ್ಲದೇ ಈ ಪ್ರಕರಣದ ಮಾತುಕತೆ ನಡೆಸಲು ಕೇಜ್ರಿವಾಲ್ ಅವರು ಸೆವೆನ್ ಸ್ಟಾರ್ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು ಎಂಬುದಕ್ಕೆ ನಮ್ಮ ಬಳಿ ಪೂರಕ ದಾಖಲೆಗಳಿವೆ. ಅವರು ತಂಗಿದ್ದ ಹೋಟೆಲ್‌ ಬಿಲ್‌ ಅನ್ನು ಪ್ರಕರಣದ ಆರೋಪಿಯೊಬ್ಬರು ಭಾಗಶಃ ಪಾವತಿಸಿದ್ದಾರೆ ಎಂಬುದಕ್ಕೂ ಪುರಾವೆಗಳಿವೆ ಎಂಬ ಮಾಹಿತಿಯನ್ನ ಚಾರ್ಜ್‌ಶೀಟ್‌ನಲ್ಲಿ ದಾಖಲಿಸಿತ್ತು.

ಅರವಿಂದ ಕೇಜ್ರಿವಾಲ್ ಅವರನ್ನ 2024ರ ಮಾರ್ಚ್ 21 ರಂದು ಈ ಪ್ರಕರಣದಲ್ಲಿ ಮೊದಲ ಬಾರಿಗೆ ಬಂಧಿಸಲಾಗಿತ್ತು.

TAGGED:aapArvind KejriwalDelhi excise policy caseK KavithaManish Sisodiaಅರವಿಂದ್ ಕೇಜ್ರಿವಾಲ್ಕೆ ಕವಿತಾಮನೀಶ್ ಸಿಸೋಡಿಯಾ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
25 minutes ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
40 minutes ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
55 minutes ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
1 hour ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
1 hour ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?