ಬೆಂಗಳೂರು: ನೂತನ ವಿಧಾನಸಭಾ ಸದಸ್ಯರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಹೆಚ್.ವೈ.ಮೇಟಿ ಹಾಗೂ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಾಲಗಕೋಟೆ ಹಾಗೂ ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾಗಿರುವ ಉಮೇಶ ಹುಲ್ಲಪ್ಪ ಮೇಟಿ (Umesh Meti) ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ (Samarth Mallikarjun) ಅವರು ವಿಧಾನಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಮೇ 11 ರಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 334ರಲ್ಲಿ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು.
ಪ್ರಮಾಣವಚನ ಕಾರ್ಯಕ್ರಮವನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ನಿಧನದ ಕಾರಣ ಮುಂದೂಡಲಾಗಿದೆ ಎಂದು ವಿಧಾನ ಸಭೆಯ ಕಚೇರಿ ಪ್ರಕಟಣೆ ತಿಳಿಸಿದೆ.

