ರಾಯಚೂರು: ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ. ಪ್ರಧಾನಿ ಮೋದಿಯವರ (Narendra Modi) ಕಣ್ಣಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅವರು ಹೇಳಿದರು.
ಲಿಂಗಸಗೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಕರ್ನಾಟಕದಲ್ಲಿ ಸಿಎಂ ಕುರ್ಚಿ ಅಲುಗಾಡುತ್ತಿದೆ. ಕೇರಳ, ಪಂಜಾಬ್‌ನಲ್ಲೂ ಇದೇ ರೀತಿ ಆಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ ಎಂದರು. ಇದನ್ನೂ ಓದಿ: ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ – ಕುರ್ಚಿ ಕಿತ್ತಾಟಕ್ಕೆ ಮೋದಿ ಲೇವಡಿ
ಡಿ.ಸುಧಾಕರ್ ಅವರ ನಿಧನದ ಬಗ್ಗೆ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಅವರು ನಮ್ಮೊಡನೆ ಇರಬೇಕಿತ್ತು. ಅವರ ಅನಾರೋಗ್ಯದ ಕಾರಣಕ್ಕೆ ಇದು ಸಾಧ್ಯವಾಗಲಿಲ್ಲ. ನನ್ನನ್ನ, ಮುಖ್ಯಮಂತ್ರಿ ಅವರನ್ನ ಭೇಟಿ ಮಾಡಿದಾಗಲೆಲ್ಲ ಸದಾ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತಾಗಿ ಮನವಿ ಮಾಡುತ್ತಲೇ ಇದ್ದರು. ಅವರು ಜೈನ ಸಮುದಾಯಕ್ಕೆ ಸೇರಿದವರು. ಕಡಿಮೆ ಜನಸಂಖ್ಯೆ ಇದ್ದರು ಸಹ ಎಲ್ಲಾ ಸಮುದಾಯದ ಜನರನ್ನ ಪ್ರೀತಿಯಿಂದ ಕಾಣುತ್ತಿದ್ದರು. ಹೃದಯ ಶ್ರೀಮಂತಿಕೆ ಇದ್ದಂತಹ ಮನುಷ್ಯ. ಇವರ ಸಾವಿನಿಂದ ನಮ್ಮ ಸರ್ಕಾರಕ್ಕೆ, ಕ್ಷೇತ್ರಕ್ಕೆ ನಷ್ಟ ಉಂಟಾಗಿದೆ. ನನಗೆ ವೈಯಕ್ತಿಕವಾಗಿ ಬಹಳ ಆಘಾತವಾಗಿದೆ ಎಂದರು. ಇದನ್ನೂ ಓದಿ: ಕೇರಳದಲ್ಲಿ 3 ಸ್ಥಾನ ಗೆದ್ದಿದ್ದೇವೆ, ಮುಂದೆ ಅಲ್ಲಿಯೂ ಸರ್ಕಾರ ರಚನೆ ಮಾಡುತ್ತೇವೆ: ಮೋದಿ

