ಟೆಹ್ರಾನ್: ಇಸ್ರೇಲ್-ಯುಎಸ್ ನಡೆಸಿದ ಜಂಟಿ ದಾಳಿಗೆ ಇರಾನ್ನ ರಕ್ಷಣಾ ಸಚಿವ ಅಮೀರ್ ನಾಸಿರ್ಜಾದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ.
ಇಸ್ರೇಲ್ ದಾಳಿಯಲ್ಲಿ ಇರಾನ್ ರಕ್ಷಣಾ ಸಚಿವ ಅಮೀರ್ ನಾಸಿರ್ಜಾದೆ ಮತ್ತು ಕ್ರಾಂತಿಕಾರಿ ಗಾರ್ಡ್ ಕಮಾಂಡರ್ ಮೊಹಮ್ಮದ್ ಪಕ್ಪೌರ್ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಮಿಲಿಟರಿ ಕಾರ್ಯಾಚರಣೆಗಳ ಬಗ್ಗೆ ತಿಳಿದಿರುವ ಎರಡು ಮೂಲಗಳು ಮತ್ತು ಒಂದು ಪ್ರಾದೇಶಿಕ ಮೂಲಗಳು ಶಂಕೆ ವ್ಯಕ್ತಪಡಿಸಿವೆ.

