Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಸಿದ್ಧ ಶಿಯಾ ಮಸೀದಿ ಮೇಲೆ ಹಾರಿತು ಕೆಂಪು ಧ್ವಜ – ಪ್ರತೀಕಾರದ ಶಪಥ ಮಾಡಿದ ಇರಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಸಿದ್ಧ ಶಿಯಾ ಮಸೀದಿ ಮೇಲೆ ಹಾರಿತು ಕೆಂಪು ಧ್ವಜ – ಪ್ರತೀಕಾರದ ಶಪಥ ಮಾಡಿದ ಇರಾನ್

Latest

ಪ್ರಸಿದ್ಧ ಶಿಯಾ ಮಸೀದಿ ಮೇಲೆ ಹಾರಿತು ಕೆಂಪು ಧ್ವಜ – ಪ್ರತೀಕಾರದ ಶಪಥ ಮಾಡಿದ ಇರಾನ್

Public TV
Last updated: March 2, 2026 7:48 am
Public TV
Share
4 Min Read
Iran Raises Red Flag Over Mosque After Khamenei Killing
SHARE

ಟೆಹ್ರಾನ್: ಅಮೆರಿಕ, ಇಸ್ರೇಲ್ ಜಂಟಿ ದಾಳಿಯ (Israel-US Attack) ಬಳಿಕ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ಇರಾನ್ ಪ್ರತಿದಾಳಿಯ ಆಟ ಮುಂದುವರಿಸಿದೆ. ಇಸ್ರೇಲ್‌ನ ಜೊತೆಗೆ ಇತರೆ ಮುಸ್ಲಿಂ ದೇಶಗಳಲ್ಲಿರುವ ಅಮೆರಿಕ ನೆಲೆಗಳನ್ನು ಧ್ವಂಸ ಮಾಡುತ್ತಿದೆ. ಇರಾನ್‌ಗೆ ಮಧ್ಯಂತರ ಸುಪ್ರೀಂ ನಾಯಕನ ಆಯ್ಕೆಯಾಗಿದ್ದು, ಇನ್ನೆರಡು ದಿನಗಳಲ್ಲಿ ಖಾಯಂ ನಾಯಕನ ಆಯ್ಕೆಯೂ ಆಗಲಿದೆ. ಈ ನಡುವೆ ಇರಾನ್ (Iran) ತನ್ನ ಪ್ರಮುಖ ಮಸೀದಿಯ ಮೇಲೆ ಕೆಂಪು ಬಾವುಟ ಹಾರಿಸಿದ್ದು, ತೀವ್ರ ಸ್ವರೂಪದ ಪ್ರತಿದಾಳಿಯ ಸುಳಿವು ನೀಡಿದೆ.

ಹೌದು, ಇರಾನ್‌ನ ಕೋಮ್ ನಗರದ ಪ್ರಸಿದ್ಧ ಶಿಯಾ ಮಸೀದಿ ಜಮ್ಕರನ್ ಮಸೀದಿಯ (Jamkaran Mosque) ಮೇಲೆ ಕೆಂಪು ಧ್ವಜವನ್ನು ಹಾರಿಸಲಾಗಿದೆ. ಅಮೆರಿಕ ಮತ್ತು ಇಸ್ರೇಲ್ ಜಂಟಿ ಪಡೆಗಳಿಂದ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ನಂತರ ದೇಶವು ಯುದ್ಧಕ್ಕೆ ಸಿದ್ಧವಾಗಿದೆ ಎಂಬುದರ ಸಾಂಕೇತಿಕ ಸೂಚಕವಾಗಿ ಈ ಧ್ವಜವನ್ನು ಹಾರಿಸಲಾಗಿದೆ. ಶಿಯಾ ಸಂಪ್ರದಾಯದಲ್ಲಿ ಕೆಂಪು ಧ್ವಜವು ಅನ್ಯಾಯವಾಗಿ ಚೆಲ್ಲಿದ ರಕ್ತವನ್ನು ಸಂಕೇತಿಸುತ್ತದೆ ಮತ್ತು ಕೊಲ್ಲಲ್ಪಟ್ಟ ವ್ಯಕ್ತಿಯ ಸೇಡು ತೀರಿಸಿಕೊಳ್ಳಲು ಕರೆಯಾಗಿ ಕಾರ್ಯನಿರ್ವಹಿಸುತ್ತದೆ. ಇದನ್ನೂ ಓದಿ: ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವಾರು ಇತರ ನಗರಗಳಲ್ಲಿ ಕೆಂಪು ಧ್ವಜವನ್ನು ಹಾರಿಸಲಾಗಿದೆ. ಇದಕ್ಕೆ ಪೂರಕ ಎನ್ನುವಂತೆ ಶತ್ರುಗಳ ಮಿಲಿಟರಿ ನೆಲೆಗಳನ್ನು ನಾಶಮಾಡುವುದನ್ನು ಇರಾನ್ ಮುಂದುವರಿಸಲಿದೆ ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಝೆಶ್ಕಿಯಾನ್ ಹೇಳಿದ್ದಾರೆ. ಅಯತೊಲ್ಲಾ ಅಲಿ ಖಮೀನಿ ಹತ್ಯೆಯನ್ನು ಒಂದು ಮಹಾ ಅಪರಾಧ ಎಂದು ಖಂಡಿಸಿದ್ದ ಇರಾನ್ ಅಧ್ಯಕ್ಷ ಮಸೂದ್ ಪೆಝೆಶ್ಕಿಯಾನ್, ಇದಕ್ಕೆ ಪ್ರತಿಕ್ರಿಯೆ ನೀಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಇದನ್ನೂ ಓದಿ: ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

ಅಮೆರಿಕ ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಖಮೇನಿ (Ayatollah Ali Khamenei) ನಿಧನರಾಗಿದ್ದಾರೆ. ತನ್ನ ನಾಯಕನ ಸಾವು ಇರಾನ್‌ನೊಳಗೆ ಪ್ರತಿಕಾರದ ಕಿಚ್ಚು ಹೊತ್ತಿಸಿದೆ. ಇಸ್ರೇಲ್ ಅಮೆರಿಕದ ದಾಳಿ ಬಳಿಕ ಇರಾನ್ ಈಗ ಪ್ರತಿದಾಳಿಗಳನ್ನು ಆರಂಭಿಸಿದೆ. ಅಮೆರಿಕದ ಏರ್‌ಕ್ರ‍್ಯಾಫ್ಟ್ ಕ್ಯಾರಿಯರ್ ಅಬ್ರಹಾಂ ಲಿಂಕನ್ ಮೇಲೆ ಇರಾನ್ ನಾಲ್ಕು ಬ್ಯಾಲೆಸ್ಟಿಕ್ ಮಿಸೈಲ್‌ಗಳನ್ನು ಹಾರಿಸಿದೆ. ಇದನ್ನೂ ಓದಿ: ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Iran Raises Red Flag Over Mosque After Khamenei Killing 1

ಇರಾನ್ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ನೆಲೆಗಳ ವಿರುದ್ಧ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸುವುದಾಗಿ ಎಚ್ಚರಿಸಿದೆ. ಇದರ ಜೊತೆಗೆ ಇಸ್ರೇಲ್ ಮೇಲೆಯೂ ದಾಳಿ ನಡೆಸಿದೆ. ಬೀಟ್ ಶೆಮೆಶ್‌ನಲ್ಲಿ ನಡೆಸಿದ ದಾಳಿಯ ನಂತರ ಕನಿಷ್ಠ 10 ಜನರನ್ನು ಕೊಂದಿದೆ. ಇರಾನ್ ಈ ಪ್ರದೇಶದಲ್ಲಿ ಶಾಂತಿಯನ್ನು ಬಯಸುವುದಾಗಿ ಹೇಳಿದೆ. ಈ ಪ್ರದೇಶದಲ್ಲಿನ ಅಮೆರಿಕದ ನೆಲೆಗಳನ್ನು ಮಾತ್ರ ಗುರಿಯಾಗಿಸಿಕೊಂಡಿದೆ ಎಂದು ಹೇಳಿದೆ. ಈ ಮೂಲಕ ಇರಾಕ್, ಕುವೈತ್, ಕತಾರ್ ಮತ್ತು ಬಹ್ರೇನ್, ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿರುವ ಅಮೆರಿಕದ ನೆಲೆಗಳು ಮಾತ್ರ ನಮ್ಮ ಟಾರ್ಗೆಟ್ ಎಂದು ಇರಾನ್ ಹೇಳಿದೆ. ಭಾನುವಾರ ಇರಾನ್ ನಡೆಸಿದ ದಾಳಿಗಳಲ್ಲಿ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

ಯುಎಇ ಇರಾನ್‌ನ 165 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಪತ್ತೆಹಚ್ಚಿದ್ದು, 152 ಕ್ಷಿಪಣಿಗಳನ್ನು ನಾಶಪಡಿಸಿದೆ ಮತ್ತು ಎರಡು ಕ್ರೂಸ್ ಕ್ಷಿಪಣಿಗಳನ್ನು ತಡೆಹಿಡಿದಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಒಟ್ಟು 541 ಇರಾನಿನ ಡ್ರೋನ್‌ಗಳನ್ನು ಪತ್ತೆಹಚ್ಚಲಾಗಿದೆ. ಅವುಗಳಲ್ಲಿ 506 ಅನ್ನು ತಡೆಹಿಡಿದು ನಾಶಪಡಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಇನ್ನು ಬಹ್ರೇನ್‌ನ ರಾಜಧಾನಿ ಮನಾಮದಲ್ಲಿರುವ ಕ್ರೌನ್ ಪ್ಲಾಜಾ ಹೋಟೆಲ್ ಮೇಲೆ ಇರಾನ್‌ನಿಂದ ನಡೆದ ದಾಳಿಯಿಂದ ಕಟ್ಟಡಕ್ಕೆ ಹಾನಿಯಾಗಿದೆ. ಆದರೆ ಯಾವುದೇ ಜೀವಹಾನಿ ಸಂಭವಿಸಿಲ್ಲ. ಇದಕ್ಕೂ ಮುನ್ನ ಅಮೆರಿಕ ನೌಕಾಪಡೆಯ 5ನೇ ಫ್ಲೀಟ್ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿತ್ತು. ಇದನ್ನೂ ಓದಿ: ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ, ರಕ್ಷಣೆಗೆ ಸಹಾಯವಾಣಿ ಬಿಡುಗಡೆ

ಆಪರೇಷನ್ ಎಪಿಕ್ ಫ್ಯೂರಿಯ ಭಾಗವಾಗಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಮೆರಿಕ ಹೇಳಿಕೊಂಡಿದೆ. ಸಣ್ಣಪುಟ್ಟ ಗಾಯಗೊಂಡ ಹಲವಾರು ಇತರ ಸೇನಾ ಸದಸ್ಯರು ಶೀಘ್ರ ಕರ್ತವ್ಯಕ್ಕೆ ಮರಳುವ ಪ್ರಕ್ರಿಯೆಯಲ್ಲಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ಚೀನಾದ ಶಸ್ತ್ರಾಸ್ತ ನಂಬಿ ಪ್ರಾಣ ಕಳೆದುಕೊಂಡ ಖಮೇನಿ!

ಇನ್ನು ಇರಾನ್ ಸುಪ್ರೀಂ ನಾಯಕ ಖಮೇನಿ ನಿಧನದ ಬಳಿಕ ಗಾರ್ಡಿಯನ್ ಕೌನ್ಸಿಲ್‌ನ ಪ್ರಭಾವಿ ಧರ್ಮಗುರು ಅಲಿರೆಝಾ ಅರಾಫಿ ಅವರನ್ನು ತಾತ್ಕಾಲಿಕ ನಾಯಕತ್ವ ಮಂಡಳಿಗೆ ನೇಮಿಸಲಾಗಿದೆ. ತಜ್ಞರ ಸಭೆ ಹೊಸ ಸರ್ವೋಚ್ಚ ನಾಯಕನನ್ನು ಆಯ್ಕೆ ಮಾಡುವವರೆಗೆ, ಸರ್ವೋಚ್ಚ ನಾಯಕನ ಸಂವಿಧಾನಾತ್ಮಕ ಕರ್ತವ್ಯಗಳನ್ನು ಈ ಮೂವರು ಸದಸ್ಯರ ಮಂಡಳಿ ನಿರ್ವಹಿಸಲಿದೆ. ಇದರ ಜೊತೆಗೆ ಇಸ್ಲಾಮಿಕ್ ರೆವುಲ್ಯೂಷನರಿ ಗಾರ್ಡ್ ಕಾರ್ಪ್ಸ್‌ಗೆ ಹೊಸ ಮುಖ್ಯ ಕಮಾಂಡರ್ ಆಗಿ ಅನುಭವಿ ಮಿಲಿಟರಿ ಅಧಿಕಾರಿ, ಮಾಜಿ ರಕ್ಷಣಾ ಸಚಿವ ಮತ್ತು ಆಂತರಿಕ ಸಚಿವರಾಗಿರುವ ಬ್ರಿಗೇಡಿಯರ್ ಜನರಲ್ ಅಹ್ಮದ್ ವಹಿದಿಯನ್ನು ನೇಮಿಸಲಾಗಿದೆ. ಈ ನಡುವೆ ಒಂದು ಅಥವಾ ಎರಡು ದಿನಗಳಲ್ಲಿ ಹೊಸ ಸರ್ವೋಚ್ಚ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಇರಾನ್ ವಿದೇಶಾಂಗ ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಖಮೇನಿ ಹತ್ಯೆಗೆ ಪ್ರತೀಕಾರ – ಇರಾನ್‌ ಕ್ಷಿಪಣಿ ದಾಳಿಗೆ ಇಸ್ರೇಲ್‌ನಲ್ಲಿ 10 ಮಂದಿ ಸಾವು

ಒಟ್ಟಾರೆ ಸೇಡಿನ ಜ್ವಾಲೆಯಲ್ಲಿ ಕುದಿಯುತ್ತಿರುವ ಇರಾನ್ ಪ್ರತಿಕಾರಕ್ಕೆ ಹಂಬಲಿಸುತ್ತಿದೆ. ಶೀಘ್ರದಲ್ಲಿ ದೊಡ್ಡ ದಾಳಿಗೆ ಪ್ಲ್ಯಾನ್ ನಡೆಸಿದ್ದು ತನ್ನ ಸುಪ್ರೀಂ ನಾಯಕನ ಕೊಂದ ಅಮೆರಿಕ, ಇಸ್ರೇಲ್‌ಗೆ ಮುಟ್ಟಿ ನೋಡಿಕೊಳ್ಳುವಂತ ತಿರುಗೇಟು ಕೊಡುವ ತಯಾರಿಯಲ್ಲಿದೆ. ಇದನ್ನೂ ಓದಿ: 15 ಭಾರತೀಯರಿದ್ದ ತೈಲ ಟ್ಯಾಂಕರ್ ಮೇಲೆ ಇರಾನ್‌ ದಾಳಿ

TAGGED:ayatollah ali khameneiiranIran-Israel AirstrikeIsraelIsrael - US AttackJamkaran MosqueRed Flagಅಮೆರಿಕಇರಾನ್ಇರಾನ್-ಇಸ್ರೇಲ್ ಯುದ್ಧಇಸ್ರೇಲ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
3 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
15 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
57 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?