ಮಂಗಳೂರು: ಕಳೆದ ಒಂದು ತಿಂಗಳಿಂದ ಪ್ರೇಯಸಿ ಮೆಸೇಜ್ ಹಾಗೂ ಕರೆಗೆ ಪ್ರತಿಕ್ರಿಯಿಸದೇ ಇದ್ದಿದ್ದಕ್ಕೆ ಮನನೊಂದು ಸೋಮೇಶ್ವರದ (Someshwara) ಯುವಕನೊಬ್ಬ ಒಮಾನ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಈತ ಕಳೆದ ಒಂದೂವರೆ ವರ್ಷದಿಂದ ಒಮನ್‍ನ (Oman) ಲಿಫ್ಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವಾದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದು, ಮರಳಿ ಒಮನ್‍ಗೆ ತೆರಳಿದ್ದ. ಇತ್ತೀಚೆ ಪ್ರೀತಿಸುತ್ತಿದ್ದ ಯುವತಿ ಪುನೀತ್‍ನ ಕರೆ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ
ಈ ಬಗ್ಗೆ ಸ್ನೇಹಿತರೊಂದಿಗೆ ಮಾಹಿತಿ ಹಂಚಿಕೊಂಡಿದ್ದ ಪುನೀತ್, ಯುವತಿ ಪ್ರೀತಿ (Love) ನಿರಾಕರಿಸಿದ್ದಾಗಿ ಹೇಳಿಕೊಂಡಿದ್ದ. ಇದೇ ಕಾರಣಕ್ಕೆ ಮನನೊಂದ ಸಾಮಾಜಿಕ ಜಾಲತಾಣದಲ್ಲಿ ಲೈವ್ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಹಾಸನ | ನಿಧಾನ ಕಾರ್ ಓಡಿಸು ಎಂದಿದ್ದಕ್ಕೆ ಡಿಕ್ಕಿ ಹೊಡೆಸಿ ಯುವಕನ ಬರ್ಬರ ಹತ್ಯೆ, ಮೂವರಿಗೆ ಗಂಭೀರ ಗಾಯ

