Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Bengaluru City

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Public TV
Last updated: March 4, 2026 5:25 pm
Public TV
Share
3 Min Read
BY Vijayendra 1
SHARE

– ಒಳಮೀಸಲಾತಿಯಡಿ ಹುದ್ದೆ ಭರ್ತಿಗೆ ಬಿಜೆಪಿ ರಾಜ್ಯಾಧ್ಯಕ್ಷ ಆಗ್ರಹ

ಬೆಂಗಳೂರು: ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಎಚ್ಚರಿಕೆ ನೀಡಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ವಿಜಯೇಂದ್ರ ಮಾತನಾಡಿದರು. ಮೀಸಲಾತಿ ಪ್ರಮಾಣವನ್ನು ಶೇ.50 ರಿಂದ ಶೇ.56ಕ್ಕೆ ಏರಿಸಿದ್ದಾರೆ. ನೀವು 50 ಸಾವಿರ ಖಾಲಿ ಹುದ್ದೆ ಭರ್ತಿ ಮಾಡುತ್ತೀರಾ ಅಥವಾ 1 ಲಕ್ಷ ಹುದ್ದೆ ಭರ್ತಿ ಮಾಡುವಿರಾ ಎಂಬುದು ನಿಮಗೆ ಬಿಟ್ಟಿದ್ದು. ಎಲ್ಲ ಖಾಲಿ ಹುದ್ದೆ ಭರ್ತಿ ಮಾಡಿ ಎಂಬ ಆಗ್ರಹ ನಮ್ಮದು. ಶೇ.56 ಒಳಮೀಸಲಾತಿ ನೀಡಿ ಬಿಜೆಪಿ ಸರ್ಕಾರವು ಎಲ್ಲ ಸಮುದಾಯಗಳಿಗೆ ನ್ಯಾಯ ಕೊಡುವ ಕೆಲಸ ಮಾಡಿದೆ. ಅದರ ಆಧಾರದಡಿ ಶೋಷಿತ- ಪೀಡಿತ ಸಮುದಾಯಗಳಿಗೆ ಒಳಮೀಸಲಾತಿ ಪರಿಗಣಿಸಿ ಈ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: KPSC ಪರೀಕ್ಷೆಯಲ್ಲಿ ಮತ್ತೆ ಗೊಂದಲ – 384 ಗೆಜೆಟೆಡ್ ಹುದ್ದೆಗಳ ಸಂದರ್ಶನ ಪಟ್ಟಿಯಲ್ಲಿ ಅಕ್ರಮ ಆರೋಪ

ಮುಖ್ಯಮಂತ್ರಿಗಳೇ ಪದೇ ಪದೇ ಈ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದ್ದೀರಿ. ಪರಿಶಿಷ್ಟ ಜಾತಿ- ಪಂಗಡಗಳ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ರಾಜ್ಯ ನ್ಯಾಯಾಲಯದ ಕುಂಟುನೆಪ ಹೇಳದೆ ಈ ಸಮುದಾಯಗಳಿಗೆ ಉದ್ಯೋಗ ನೀಡಿ ನ್ಯಾಯ ಕೊಡಿ ಎಂದು ಒತ್ತಾಯಿಸಿದರು.

ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ- ಪಂಗಡಗಳ ಯುವಜನತೆ ಸೇರಿ ಎಲ್ಲ ವರ್ಗಗಳ ಜನರಿಗೆ ನ್ಯಾಯ ಕೊಡುವ ಕೆಲಸ ಮಾಡಿ. ಅದನ್ನು ಬಿಟ್ಟು ಈ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳು ತೊಟ್ಟಿಲು ತೂಗುವ ಜೊತೆಗೆ ಮಗುವನ್ನು ಚಿವುಟುವ ಕೆಲಸ ಮಾಡುತ್ತಿದ್ದು, ಇದು ಅಕ್ಷಮ್ಯ ಅಪರಾಧ. ಹಳೆಯ ಮೀಸಲಾತಿ ಪ್ರಮಾಣದಡಿ ನೇಮಕಾತಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರವು ರಾಜ್ಯದಲ್ಲಿ ಬೆಂಕಿ ಹಚ್ಚಲು ಹೊರಟಂತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ನೀವೆಷ್ಟು ದಿನ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿರುತ್ತೀರೆಂಬುದು ನಮಗೆ ತಿಳಿದಿಲ್ಲ. ಆದರೆ, ಯಾವ ಅಹಿಂದ ಸಮುದಾಯದ ಅಧಿಕಾರ ಹಿಡಿದ ಮುಖ್ಯಮಂತ್ರಿಗಳೇ ಆ ಸಮುದಾಯದ ತಾಳ್ಮೆಯನ್ನು ಪರೀಕ್ಷೆ ಮಾಡದಿರಿ. ಶೋಷಿತ- ಪೀಡಿತ ಸಮುದಾಯಗಳನ್ನು ಕೆಣಕದಿರಿ. ಒಳ ಮೀಸಲಾತಿ ಜಾರಿ ಮಾಡದೇ ಖಾಲಿ ಹುದ್ದೆ ಭರ್ತಿ ಮಾಡುವ ಕೆಲಸ ಮಾಡಿದರೆ, ರಾಜ್ಯದಲ್ಲಿ ಮುಂದೆ ಆಗುವ ಘಟನೆಗಳಿಗೆ ತಾವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದೆಲ್ಲವನ್ನು ಪರಿಗಣಿಸಿ ಸಮರ್ಪಕ ನಿರ್ಧಾರವನ್ನು ಮುಖ್ಯಮಂತ್ರಿಗಳು ಮಾಡಬೇಕೆಂದು ಮನವಿ ಮಾಡಿದರು. ಯುವಜನತೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ವಯೋಮಿತಿ ಮೀರುತ್ತಿದೆ. ಅವರ ಸಹನೆಯ ಕಟ್ಟೆ ಒಡೆದು ಹೋಗಿದೆ. ಇದನ್ನು ಕೂಡ ಪರಿಗಣಿಸಿ ನ್ಯಾಯ ಕೊಡುವ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ತಮ್ಮ ಗೌರವ ಉಳಿಸಿಕೊಳ್ಳಬೇಕೆಂದು ಒತ್ತಾಯವನ್ನು ಮುಂದಿಟ್ಟರು.

ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಪ್ರಾರಂಭ ಆಗಲಿವೆ
ಇದೇ 6ರಂದು ಅಧಿವೇಶನ ಆರಂಭ ಆಗುತ್ತಿದೆ. ಸರಣಿ ಪ್ರತಿಭಟನೆಗಳು ಬೆಂಗಳೂರಿನಲ್ಲಿ ಪ್ರಾರಂಭ ಆಗಲಿದೆ. ನುಡಿದಂತೆ ನಡೆದ ಸರ್ಕಾರ ಯಾವುದೇ ಭರವಸೆಯನ್ನೂ ಈಡೇರಿಸಿಲ್ಲ ಎಂದು ಟೀಕಿಸಿದರು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹೋರಾಟ ಪ್ರಾರಂಭ ಮಾಡಲಿದ್ದಾರೆ. ಅತಿಥಿ ಉಪನ್ಯಾಸಕರ ಆಶ್ವಾಸನೆಯನ್ನೂ ಸರ್ಕಾರ ಈಡೇರಿಸಿಲ್ಲ. ಅವರೂ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಸೃಷ್ಟಿಯಾಗಿದೆ ಎಂದು ಗಮನ ಸೆಳೆದರು.

ಕೆಎಸ್‍ಆರ್‌ಟಿಸಿ-ಬಿಎಂಟಿಸಿ ನೌಕರರಿಗೆ ಪಿಎಫ್- ಗ್ರಾಚ್ಯುಟಿ ಕೊಡದೇ ಅನ್ಯಾಯ ಮಾಡುತ್ತಿದ್ದು, ಅವರೂ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಮತ್ತೊಂದು ಕಡೆ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರೂ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿಗೆ ಬಂದು ತಲುಪಿದೆ. ಮತ್ತೊಂದೆಡೆ 108 ಅಂಬುಲೆನ್ಸ್ ಕೆಟ್ಟುನಿಂತು ನೌಕರರಿಗೆ ಸಂಬಳ ಕೊಟ್ಟಿಲ್ಲ. 34 ತಿಂಗಳಿನಿಂದ ಸಣ್ಣಪುಟ್ಟ ಗುತ್ತಿಗೆದಾರರು ಸೇರಿಸಿಕೊಂಡು ಸುಮಾರು 40- 45 ಸಾವಿರ ಕೋಟಿ ಬಾಕಿ ಉಳಿಸಿಕೊಂಡಿದ್ದಾರೆ. ಈಗಾಗಲೇ ಆತ್ಮಹತ್ಯೆ ಪ್ರಕರಣಗಳೂ ನಡೆದಿವೆ ಎಂದು ವಿವರಿಸಿದರು. ಬೆಂಗಳೂರಿನ ಕಸದ ಸಮಸ್ಯೆ ತಮಗೆ ತಿಳಿದೇ ಇದೆ. ಪೌರಕಾರ್ಮಿಕರ ಹೋರಾಟವೂ ನಡೆಯಲಿದ್ದು, ಸರಣಿ ಹೋರಾಟಗಳು ಪ್ರಾರಂಭ ಆಗಲಿವೆ. ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾಡಿನಾದ್ಯಂತ ಹೋಳಿ ಸಂಭ್ರಮ – ಬಣ್ಣದಲ್ಲಿ ಮಿಂದೆದ್ದ ಚಿಣ್ಣರು, ಯುವಕ-ಯುವತಿಯರು

ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರನ್ನು ಸಮಾಧಾನಪಡಿಸಲು ನೀವು ವಿದೇಶ ಪ್ರವಾಸ ಕಲ್ಪಿಸಿ ಕೊಟ್ಟಿದ್ದೀರೆಂದರೆ, ರಾಜ್ಯದ ಆಡಳಿತ ಸಂಪೂರ್ಣ ಕುಸಿದಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಅಭಿವೃದ್ಧಿಯಿಂದ ಕರ್ನಾಟಕವು ವಂಚಿತವಾಗಿದೆ. ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ. ಇದು ವಾಸ್ತವಿಕ ಸತ್ಯ. ಆದ್ದರಿಂದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರವನ್ನು ದೂರುವುದನ್ನು ಬಿಟ್ಟು ಇವೆಲ್ಲ ವಿಚಾರಗಳನ್ನು ಪರಿಗಣಿಸಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

TAGGED:B.Y vijayendrabengalurubjpcongressಕಾಂಗ್ರೆಸ್ಬಿ.ವೈ.ವಿಜಯೇಂದ್ರಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories

You Might Also Like

Bhatkal people petrol bunk
Latest

ಇಸ್ರೇಲ್‌-ಇರಾನ್‌ ಯದ್ಧ; ಭಟ್ಕಳದಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಸಾಲುಗಟ್ಟಿ ನಿಂತ ಜನ

Public TV
By Public TV
3 minutes ago
basava kalyana police station protest
Bidar

ಮೌಲ್ವಿಗಳನ್ನ ಚುಡಾಯಿಸಿದ್ದಕ್ಕೆ ಕೆರಳಿ ಪ್ರೊಟೆಸ್ಟ್ – ಪೊಲೀಸ್ ಠಾಣೆ ಎದುರು ಭಾರಿ ಹೈಡ್ರಾಮಾ

Public TV
By Public TV
29 minutes ago
Pakistan and Saudi Arabia agreement
Latest

ಇರಾನ್-ಇಸ್ರೇಲ್ ಯುದ್ಧಕ್ಕೆ ಪಾಕಿಸ್ತಾನ ಎಂಟ್ರಿ ಕೊಡುತ್ತಾ?

Public TV
By Public TV
1 hour ago
Iris Dena
Latest

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ದಾಳಿ; ಇರಾನ್‌ ನೌಕೆ ಮುಳುಗಡೆ – 148 ಮಂದಿ ನಾಪತ್ತೆ

Public TV
By Public TV
1 hour ago
kea
Bengaluru City

UGCET | ಶುಲ್ಕ ಪಾವತಿಗೆ ಮಾ.7 ಕೊನೆ ದಿನ: ಕೆಇಎ

Public TV
By Public TV
2 hours ago
Nitish Kumar Bihar
Latest

ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ? – ನಿತೀಶ್ ಪುತ್ರ ನಿಶಾಂತ್‌ಗೆ ಡಿಸಿಎಂ ಹುದ್ದೆಗೆ ಡೀಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?