ನವದೆಹಲಿ: ಇಸ್ರೇಲ್, ಅಮೆರಿಕ ಜಂಟಿ ದಾಳಿಯಲ್ಲಿ ಹತ್ಯೆಯಾದ ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(Ayatollah Ali Khamenei) ಅವರಿಗೆ ಭಾರತ (India) ಸಂತಾಪ ವ್ಯಕ್ತಪಡಿಸಿದೆ.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ (Vikram Misri) ಅವರು ಇಂದು ದೆಹಲಿಯಲ್ಲಿರುವ ಇರಾನ್ (Iran) ರಾಯಭಾರ ಕಚೇರಿಗೆ ತೆರಳಿ ಸಂತಾಪ ಪುಸ್ತಕಕ್ಕೆ ಸಹಿ ಹಾಕಿದರು.
ವಿದೇಶಾಂಗ ಸಚಿವ ಎಸ್ ಜೈಶಂಕರ್ (Jaishankar) ಅವರೂ ಇರಾನಿನ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಇದನ್ನೂ ಓದಿ: ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ: ಮೋದಿ
Foreign Secretary Shri Vikram Misri visited the Embassy of the Islamic Republic of Iran and signed the condolence book, on behalf of the people and the Government of India, on the demise of Supreme Leader Ayatollah Syed Ali Khamenei. pic.twitter.com/lOODHeI5fm
— Randhir Jaiswal (@MEAIndia) March 5, 2026
ಖಮೇನಿ ಹತ್ಯೆಯಾದ ಬೆನ್ನಲ್ಲೇ ಭಾರತ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂಬ ಟೀಕೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಖಮೇನಿ ಸಾವನಪ್ಪಿದ 5 ದಿನದ ನಂತರ ಸಂತಾಪ ವ್ಯಕ್ತಪಡಿಸುವ ಮೂಲಕ ಮೊದಲ ಪ್ರತಿಕ್ರಿಯೆ ನೀಡಿದೆ.
ಇರಾನ್ ಮೇಲಿನ ಅಮೆರಿಕ-ಇಸ್ರೇಲಿ ದಾಳಿಯನ್ನು ಭಾರತ ಖಂಡಿಸಿಲ್ಲ. ಪ್ರಧಾನಿ ಮೋದಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿ ಯುದ್ಧವನ್ನು ಬೇಗನೆ ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ.

