ಕೋಲ್ಕತ್ತಾ: ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ ಮಾಡಿದ ಹಿನ್ನೆಲೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ರಾಷ್ಟ್ರಪತಿ ಮುರ್ಮು (Droupadi Murmu) ಕಿಡಿಕಾರಿದ್ದಾರೆ.
ಸಿಲಿಗುರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು, ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅನುಮತಿ ನೀಡುವಲ್ಲಿ ವಿಳಂಬ, ಸ್ಥಳ ಬದಲಾವಣೆ ಮತ್ತು ಪ್ರೋಟೋಕಾಲ್ ಪಾಲನೆಯಲ್ಲಿನ ಲೋಪಗಳ ಬಗ್ಗೆ ಪ್ರಸ್ತಾಪಿಸಿ ಅಸಮಾಧಾನಗೊಂಡಿದ್ದಾರೆ. ಮಮತಾ ದೀದಿ ನೀವೂ ನನ್ನ ಸಹೋದರಿ ಇದ್ದಂತೆ, ನಾನು ಕೂಡ ಬಂಗಾಳದ ಮಗಳು. ಇಲ್ಲಿಗೆ ಬರಲು ನನಗೇಕೆ ಅವಕಾಶ ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದಳಪತಿ ವಿಜಯ್‌ಗೆ ದಿನಕ್ಕೊಂದು ಶಾಕ್ – ವಸತಿ ರಕ್ಷಣೆ ಕೋರಿ ಪತ್ನಿ ಸಂಗೀತಾ ಅರ್ಜಿ
ಮೊದಲು ಬಿದಾನಗರದಲ್ಲಿ ನಡೆಯಬೇಕಿದ್ದ ʻಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶ’ಕ್ಕೆ ಮಮತಾ ಬ್ಯಾನರ್ಜಿ ಸರ್ಕಾರ ಅನುಮತಿ ನೀಡದ ಕಾರಣ, ಕೊನೆಕ್ಷಣದಲ್ಲಿ ಕಾರ್ಯಕ್ರಮದ ಸ್ಥಳವನ್ನು ಬಾಗ್ದೋಗ್ರಾ ವಿಮಾನ ನಿಲ್ದಾಣದ ಸಮೀಪದ ಗೋಸೈನ್ಪುರಕ್ಕೆ ಬದಲಾಯಿಸಬೇಕಾಯಿತು. ಈ ಬಗ್ಗೆ ರಾಷ್ಟ್ರಪತಿಗಳು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಮಮತಾ ಬ್ಯಾನರ್ಜಿ ಬಿಜೆಪಿ ಹೇಳಿದಂತೆ ರಾಜಕೀಯ ಮಾಡಬೇಡಿ. ಬಿಜೆಪಿ ಆಡಳಿತವಿರುವ ರಾಜ್ಯಗಳ ಸ್ಥಿತಿಗಳನ್ನು ನೋಡಿ. ಬುಡುಕಟ್ಟು ಜನಾಂಗದವರ ಮೇಲೆ ದೌರ್ಜನ್ಯವಾದಾಗ ಎಲ್ಲಿ ಹೋಗಿದ್ರಿ ಎಂದು ಪ್ರಶ್ನಿಸಿದ್ದಾರೆ. ಪ್ರಧಾನಿ ಮೋದಿ, ರಾಷ್ಟ್ರಪತಿಗಳಿಗೆ ಮಾಡಿದ ಅವಮಾನ ಎಂದು ದಿದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ: 4 ಪ್ರತ್ಯೇಕ ಕೇಸ್‌ಗಳಲ್ಲಿ ಬಿಡಿಎ ಅಧಿಕಾರಿಗೆ 1 ಲಕ್ಷ, ಮತ್ತೊಬ್ಬ ಅಧಿಕಾರಿಗೆ 25 ಸಾವಿರ ರೂ. ದಂಡ

