ಚಿಕ್ಕಮಗಳೂರು: ಜಿಲ್ಲೆಯಲ್ಲಿ (Chikkamagaluru) ಐವರು ಕಾಂಗ್ರೆಸ್ (Congress) ಶಾಸಕರಿದ್ದಾರೆ. ಅವರಲ್ಲೇ ಒಬ್ಬರನ್ನ ಮಂತ್ರಿ ಮಾಡಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಲಿ. ಈ ಬಗ್ಗೆ ನಾನು ಸಿಎಂ ಬಳಿಯೂ ಹೇಳಿದ್ದೇನೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ (K.J. George) ಹೇಳಿದ್ದಾರೆ.
ಮೂಡಿಗೆರೆ ಪಟ್ಟಣದಲ್ಲಿ ನಡೆದ ಹಕ್ಕುಪತ್ರ ವಿತರಣೆ ಹಾಗೂ ಕಂದಾಯ ಗ್ರಾಮ ಘೋಷಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು. ಈ ವೇಳೆ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಡುವಿನ ಅಧಿಕಾರ ಹಂಚಿಕೆಯ ಚರ್ಚೆಗಳ ಮಧ್ಯೆಯೇ ಸಚಿವರು ಜಿಲ್ಲೆಯಲ್ಲೇ 5 ಕಾಂಗ್ರೆಸ್ ಶಾಸಕರಿದ್ದಾರೆ. ಅವರಲ್ಲೇ ಒಬ್ಬರನ್ನ ಮಂತ್ರಿ ಮಾಡಿ. ದಿನದ 24 ಗಂಟೆಯೂ ಜನರ ಮಧ್ಯೆ ಇರುವವರನ್ನೇ ಜಿಲ್ಲಾ ಉಸ್ತುವಾರಿ ಮಾಡಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ರೆ ಮನೆ-ಮನೆಗಳಲ್ಲಿ ಚುನಾವಣೆ ಮಾಡಿ ಗಂಡ-ಹೆಂಡ್ತಿಗೆ ಜಗಳ ತಂದಿಡ್ತಾರೆ: ಛಲವಾದಿ ಕಿಡಿ
ನಾನು ಸಚಿವ ಸ್ಥಾನದಲ್ಲಿ ಇರಲಿ ಅಥವಾ ಇಲ್ಲದಿರಲಿ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ತಮಗೆ ವೈಯಕ್ತಿಕ ಹಿತಾಸಕ್ತಿ ಇದೆ. ಸಚಿವ ಸಂಪುಟ ಪುನರ್ ರಚನೆಯು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರವಾಗಿದ್ದರೂ, ಮುಂದಿನ ದಿನಗಳಲ್ಲಿ ಸಂಪುಟ ವಿಸ್ತರಣೆಯಾದಾಗ ಚಿಕ್ಕಮಗಳೂರು ಜಿಲ್ಲೆಯ ಶಾಸಕರಿಗೇ ಸಚಿವ ಸ್ಥಾನ ನೀಡಿ. ಅವರನ್ನೇ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಚಿವರ ಈ ಮಾತು ಜಿಲ್ಲೆ ಭವಿಷ್ಯದ ರಾಜಕೀಯದ ಹೊಸ ಲೆಕ್ಕಾಚಾರಕ್ಕೆ ಕಾರಣವಾಗಿದೆ. ಇದನ್ನೂ ಓದಿ: ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ – LPG ದರ ಏರಿಕೆಗೆ ಸಿಎಂ ಕಿಡಿ

