ವಾಷಿಂಗ್ಟನ್: ಸೂರತ್‌ನಲ್ಲಿ (Surat) ಚಾಟ್‌ಜಿಪಿಟಿ (ChatGPT) ಮೂಲಕ ಸರ್ಚ್ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಇಬ್ಬರು ಯುವತಿರ ಸಾವಿಗೆ ಟೆಸ್ಲಾ ಸಿಇಒ ಎಲಾನ್ ಮಸ್ಕ್ (Elon Musk) ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ʻಅಯ್ಯೋʼ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕೇಟೀ ಮಿಲ್ಲರ್ ಎಂಬವರು ಯುವತಿಯರ ಆತ್ಮಹತ್ಯೆ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಅದರಲ್ಲಿ ChatGPT ಜೊತೆಗಿನ ಸಂವಹನದ ನಂತರ ಭಾರತದಲ್ಲಿ ಇಬ್ಬರು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವುದು ಹೇಗೆ? ಆತ್ಮಹತ್ಯೆ ಹೇಗೆ ಮಾಡಬಹುದು? ಯಾವ ಔಷಧಿಗಳನ್ನು ಬಳಸಲಾಗುತ್ತದೆ ಎಂದು ಸರ್ಚ್ ಮಾಡಿದ್ದರು. ದಯವಿಟ್ಟು ನಿಮ್ಮ ಪ್ರೀತಿಪಾತ್ರರಿಗೆ ChatGPT ಬಳಸಲು ಬಿಡಬೇಡಿ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ನ್ನು ಹಂಚಿಕೊಂಡಿರುವ ಮಸ್ಕ್ ʻಅಯ್ಯೋʼ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ದೇವಾಲಯದ ಸ್ನಾನಗೃಹದಲ್ಲಿ ಇಬ್ಬರು ಹುಡುಗಿಯರ ಮೃತದೇಹ ಪತ್ತೆ
ಸೂರತ್‌ನ ಸ್ವಾಮಿನಾರಾಯಣ ದೇವಾಲಯದ ಸ್ನಾನಗೃಹದೊಳಗೆ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಶವಗಳು ಪತ್ತೆಯಾಗಿತ್ತು. ವಿಷಕಾರಿ ಔಷಧಗಳ ಚುಚ್ಚುಮದ್ದು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿತ್ತು.
ಶುಕ್ರವಾರ ಬೆಳಗ್ಗೆ ಇಬ್ಬರು ಹುಡುಗಿಯರು ಕಾಲೇಜಿಗೆ ಮನೆಯಿಂದ ಹೊರಟಿದ್ದರು. ಆದರೆ, ಮಧ್ಯಾಹ್ನವಾದರೂ ವಾಪಸ್ ಆಗಿರಲಿಲ್ಲ. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಹುಡುಕಾಟ ಆರಂಭಿಸಿದ್ದರು. ಅವರ ಮೊಬೈಲ್ ಫೋನ್‌ಗಳ ಲೊಕೇಶನ್ ಆಧರಿಸಿ, ದೇವಾಲಯ ಸಂಕೀರ್ಣದಲ್ಲಿ ಕೊನೆಯದಾಗಿ ಇದ್ದ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದರು. ಶನಿವಾರವೂ ಹುಡುಕಾಟ ಮುಂದುವರಿದಾಗ ಆವರಣದಲ್ಲಿ ಅವರ ಸ್ಕೂಟರ್ ನಿಂತಿರುವುದು ಕಂಡುಬಂದಿತ್ತು.
ದೇವಾಲಯ ಸಂಕೀರ್ಣದ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಹುಡುಗಿಯರು ಸ್ನಾನಗೃಹದ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಸೆರೆಯಾಗಿತ್ತು. ಪೊಲೀಸರು ಸ್ಥಳಕ್ಕೆ ತಲುಪಿದಾಗ, ಸ್ನಾನಗೃಹವು ಒಳಗಿನಿಂದ ಲಾಕ್ ಆಗಿತ್ತು. ಅದನ್ನು ಒಡೆದು ಒಳನುಗ್ಗಿದಾಗ, ಹುಡುಗಿಯರು ಮೃತಪಟ್ಟಿರುವುದು ಕಂಡುಬಂದಿತ್ತು. ಅವರ ದೇಹದ ಬಳಿ ಬಿದ್ದಿದ್ದ ಒಂದು ಸಿರಿಂಜ್ ಮತ್ತು ಮೂರು ಬಾಟಲಿ ವಿಷಕಾರಿ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರ ಮೊಬೈಲ್‌ನ್ನು ಪರಿಶೀಲನೆಗೆ ವಿಧಿವಿಜ್ಞಾನ ಕೇಂದ್ರಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ಬಳ್ಳಾರಿ | ವಿದ್ಯಾರ್ಥಿ ಹತ್ಯೆ ಕೇಸ್ – 30 ಗಂಟೆ ಕಳೆದ್ರೂ ಪತ್ತೆಯಾಗದ ಆರೋಪಿ ಬಾಲಕ

