Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ – ರಾಜ್ಯಸಭೆಯಲ್ಲಿ ಗದ್ದಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ – ರಾಜ್ಯಸಭೆಯಲ್ಲಿ ಗದ್ದಲ

Latest

ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ – ರಾಜ್ಯಸಭೆಯಲ್ಲಿ ಗದ್ದಲ

Public TV
Last updated: March 9, 2026 4:12 pm
Public TV
Share
2 Min Read
Mallikarjun Kharge Rajya Sabha
SHARE

ನವದೆಹಲಿ: ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಪ್ರಾರಂಭಗೊಂಡಿದ್ದು, ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ‘ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ ಪರಿಣಾಮಗಳ’ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಅಡ್ಡಿಪಡಿಸಿದ್ದರಿಂದ ಸದನದಲ್ಲಿ (Parliament) ಗದ್ದಲ ಉಂಟಾಯಿತು.

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ನಿಯಮ 176ರ ಅಡಿಯಲ್ಲಿ ‘ಅಲ್ಪಾವಧಿ ಚರ್ಚೆ’ಗೆ ಅವಕಾಶ ಕೋರಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯ ಅಧ್ಯಕ್ಷರಿಗೆ ನೋಟಿಸ್ ನೀಡಿದ್ದರು. ಪಶ್ಚಿಮ ಏಷ್ಯಾದಲ್ಲಿನ ಅಸ್ಥಿರತೆಯಿಂದಾಗಿ ಭಾರತಕ್ಕೆ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಭಾರತವು ತನ್ನ ಒಟ್ಟು ಕಚ್ಚಾ ತೈಲದ ಸುಮಾರು 55%ರಷ್ಟನ್ನು ಈ ಪ್ರದೇಶದಿಂದಲೇ ಆಮದು ಮಾಡಿಕೊಳ್ಳುತ್ತಿದೆ ಎಂದು ಖರ್ಗೆ ತಮ್ಮ ನೋಟಿಸ್‌ನಲ್ಲಿ ಆತಂಕ ವ್ಯಕ್ತಪಡಿಸಿದ್ದರು. ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರ ಸುರಕ್ಷತೆಯ ಬಗ್ಗೆಯೂ ಚರ್ಚೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದರು. ಇದನ್ನೂ ಓದಿ: ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ

ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಶ್ಚಿಮ ಏಷ್ಯಾದ ಸ್ಥಿತಿಗತಿ ಕುರಿತು ಹೇಳಿಕೆ ನೀಡಲು ಮುಂದಾದಾರು. ಈ ವೇಳೆ ವಿರೋಧ ಪಕ್ಷದ ನಾಯಕರಿಗೆ ಮೊದಲು ಮಾತನಾಡಲು ಅವಕಾಶ ನೀಡಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಇದರಿಂದಾಗಿ ಸದನದಲ್ಲಿ ತೀವ್ರ ಗದ್ದಲ ಉಂಟಾಯಿತು. ಗದ್ದಲದ ನಡುವೆಯೇ, ಪದೇ ಪದೇ ವಿನಂತಿಸಿದ ನಂತರ ಸಭಾಧ್ಯಕ್ಷರು ನಿಯಮ 176ರ ಅಡಿಯಲ್ಲಿ (ಅಲ್ಪಾವಧಿ ಚರ್ಚೆ) ವಿಷಯವನ್ನು ಪ್ರಸ್ತಾಪಿಸಲು ಖರ್ಗೆ ಅವರಿಗೆ ಅವಕಾಶ ಮಾಡಿಕೊಟ್ಟರು. ಅಂತಿಮವಾಗಿ, ಖರ್ಗೆ ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಭಾರತದ ಇಂಧನ ಭದ್ರತೆಯ ಮೇಲಾಗುವ ಪರಿಣಾಮಗಳ ಕುರಿತು ಮಾತನಾಡಿದರು. ಇದನ್ನೂ ಓದಿ: 8 ಕೆಜಿ ಚಿನ್ನ‌ ದರೋಡೆ ಕೇಸ್‌ – ಚಿನ್ನ‌ ರಿಕವರಿ ಕಷ್ಟ ಎಂದ ಮೈಸೂರು ಎಸ್ಪಿ

ಖರ್ಗೆ ಮಾತನಾಡುತ್ತಿದ್ದಾಗ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮತ್ತು ಸಭಾಧ್ಯಕ್ಷರು ಭಾಷಣ ಮುಕ್ತಾಯಗೊಳಿಸಲು ಸೂಚಿಸಿದ್ದರಿಂದ ಸದನದಲ್ಲಿ ಮತ್ತೆ ಗದ್ದಲ ಮುಂದುವರಿಯಿತು. ಈ ನಡುವೆ ವಿರೋಧ ಪಕ್ಷಗಳ ಸದಸ್ಯರು ನಿಯಮ 267ರ ಅಡಿಯಲ್ಲಿ ಚರ್ಚೆಗೆ ಅವಕಾಶ ಕೋರಿ ನೀಡಿದ್ದ ನೋಟಿಸ್‌ಗಳನ್ನು ಸಭಾಧ್ಯಕ್ಷರು ತಿರಸ್ಕರಿಸಿದರು. ಇದನ್ನೂ ಓದಿ: ಇರಾನ್, ಇಸ್ರೇಲ್ ಯುದ್ಧ – ಸಂಕಷ್ಟಕ್ಕೀಡಾದ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ: ಜೈಶಂಕರ್

ಪಶ್ಚಿಮ ಏಷ್ಯಾದ ಉದ್ವಿಗ್ನತೆಯಿಂದ ಭಾರತಕ್ಕಾಗುವ ಪರಿಣಾಮಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೇವಾಲಾ ನೋಟಿಸ್ ನೀಡಿದ್ದರು. ಇಂಧನ ಭದ್ರತೆ, ಆರ್ಥಿಕತೆ ಮತ್ತು ಅನಿವಾಸಿ ಭಾರತೀಯರ ರಕ್ಷಣೆಯ ಬಗ್ಗೆ ಚರ್ಚಿಸಲು ಕೋರಿ ಎಎಪಿಯ ಸಂಜಯ್ ಸಿಂಗ್ ನೋಟಿಸ್ ಸಲ್ಲಿಸಿದ್ದರು. ಮತದಾರರ ಹಕ್ಕು ಕಸಿದುಕೊಳ್ಳುವಿಕೆ ಕುರಿತು ಚರ್ಚಿಸಲು ಟಿಎಂಸಿಯ ನದಿಮುಲ್ ಹಕ್ ಮತ್ತು ಸಾಕೇತ್ ಗೋಖಲೆ ನಿಯಮ 267ರ ಅಡಿ ನೋಟಿಸ್ ನೀಡಿದ್ದರು. ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಚರ್ಚಿಸಲು ಸಿಪಿಐನ ಪಿ. ಸಂತೋಷ್ ನೋಟಿಸ್ ಸಲ್ಲಿಸಿದ್ದರು ಎಂದು ವರದಿಯಾಗಿದೆ. ಸಭಾಧ್ಯಕ್ಷರು ಈ ಎಲ್ಲಾ 267ರ ಅಡಿಯ ನೋಟಿಸ್‌ಗಳನ್ನು ತಿರಸ್ಕರಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತ್ರ ನಿಯಮ 176ರ ಅಡಿಯಲ್ಲಿ ಅಲ್ಪಾವಧಿ ಚರ್ಚೆಗೆ ಅವಕಾಶ ನೀಡಿದರು. ಇದನ್ನೂ ಓದಿ: ಹಾಡಹಗಲೇ ಕಾಡಾನೆ ದಾಳಿ – ಮಹಿಳೆ ಸಾವು

TAGGED:Energy SecurityIran-Israel Airstrikemallikarjun khargeNew Delhirajya sabhaಇರಾನ್‌ ಇಸ್ರೇಲ್‌ ವಾರ್‌ಕಚ್ಚಾ ತೈಲನವದೆಹಲಿಭಾರತಮಲ್ಲಿಕಾರ್ಜುನ ಖರ್ಗೆರಾಜ್ಯಸಭೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
5 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
5 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
6 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?