ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಂಜಳಾ-ಮುನಿರಾಜು ದಂಪತಿಯ ಪುತ್ರಿ ಮೊನಿಷಾ(25) ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆ
ಮೃತ ಮೊನಿಷಾ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

