ಕಾರವಾರ: ಕುಡಿದ ಮತ್ತಿನಲ್ಲಿ ಕಾರಿಗೆ ಕಂಟೇನರ್ (Container) ಗುದ್ದಿದ ಪರಿಣಾಮ ಕಾರಿನ (Car) ಮೇಲೆ ಕಂಟೇನರ್ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರದ (Karwar) ಅರಗಾ ಗ್ರಾಮದಲ್ಲಿ ನಡೆದಿದೆ.
ಕುಡಿದ ಮತ್ತಿನಲ್ಲಿ ಕಂಟೇನರ್ ಚಾಲಕ ಎಲ್ಲರ ಜೊತೆ ಗಲಾಟೆ ಮಾಡಿದ್ದಾನೆ. ರಸ್ತೆ ಮಧ್ಯೆ ವಾಹನ ಅಡ್ಡಗಟ್ಟಿ ಗಲಾಟೆ ಮಾಡಿದ್ದು, ನಂತರ ಸಿಟ್ಟಿನಿಂದ ಕಂಟೇನರ್ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಮಹಾರಾಷ್ಟ್ರ ಪಾಸಿಂಗ್ ಕಾರಿನ ಮೇಲೆ ಕಂಟೇನರ್ ಬಿದ್ದು ಕಾರಿನಲ್ಲಿದ್ದ 8 ವರ್ಷದ ಮಗು ಮೃತಪಟ್ಟಿದೆ. ಇದನ್ನೂ ಓದಿ: SS ಮಲ್ಲಿಕಾರ್ಜುನ್ Vs ಜಮೀರ್ – ಟಿಕೆಟ್ ಕೇಳೋದು ನಮ್ಮ ಹಕ್ಕು: ಜಮೀರ್ ಟಾಂಗ್
ಕಾರಿನಲ್ಲಿದ್ದ ಕೆಲವರಿಗೆ ಗಾಯಗಳಾಗಿದ್ದು, ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಕಂಟೇನರ್ ಚಾಲಕನನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್

