Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
Last updated: March 9, 2026 8:30 pm
Public TV
Share
3 Min Read
HD Devegowda
SHARE

– ರಾಜ್ಯಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಭಾಷಣ
– ತನ್ನ ತಪ್ಪುಗಳನ್ನು ಮರೆಮಾಚಿಕೊಳ್ಳಲು ಕೇಂದ್ರವನ್ನು ದೂರುತ್ತಿದೆ!
– ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ಬದಲು ಬೆಂಗಳೂರಿನ ಕೊಳಚೆ ನೀರು

ನವದೆಹಲಿ: ಕರ್ನಾಟಕದಲ್ಲಿ (Karnataka) ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಕಾಂಗ್ರೆಸ್‌ ಸರಕಾರವು ಕೇಂದ್ರ ಸರಕಾರವನ್ನು ಅನಗತ್ಯವಾಗಿ ದೂರುತ್ತಿದೆ. ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು (HD Devegowda) ದೂರಿದ್ದಾರೆ.

ರಾಜ್ಯಸಭೆಯಲ್ಲಿ (Rajya Sabha) ಸೋಮವಾರ ಬಜೆಟ್‌ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದ ಅವರು, ಎತ್ತಿನಹೊಳೆ, ಮೇಕೆದಾಟು ಯೋಜನೆಗಳ ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ. ಅದನ್ನು ಮರೆಮಾಚಿಕೊಳ್ಳಲು ಕೇಂದ್ರವನ್ನು ದೂರುತ್ತಿದೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷದಿಂದ ಆಮೆಗತಿಯಲ್ಲಿ ಸಾಗಿರುವ ಎತ್ತಿನಹೊಳೆ ಯೋಜನೆ ವಿಚಾರವನ್ನು ಕಟುವಾಗಿ ಪ್ರಸ್ತಾಪಿಸಿದರು.

ಎತ್ತಿನಹೊಳೆ ಯೋಜನೆ(Yettinahole Project) ಕಾರ್ಯಗತ ಮಾಡುವಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಅನೇಕ ತಪ್ಪುಗಳನ್ನು ಮಾಡಿದೆ. ಪರಿಸರಕ್ಕೆ ಧಕ್ಕೆ ತಂದಿದೆ ಹಾಗೂ ಅನೇಕ ಕಾನೂನು, ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪ ಮಾಡಿದ ಮಾಜಿ ಪ್ರಧಾನಿಗಳು ಬಿಜೆಪಿ ಸರಕಾರದ ಅವಧಿಯಲ್ಲಿ ಈ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿತ್ತು. ಆಗ ಜಗದೀಶ್‌ ಶೆಟ್ಟರ್‌ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದರು. ಆಗ ಆ ಯೋಜನೆಯ ಅಂದಾಜು ವೆಚ್ಚ 8 ಸಾವಿರ ಕೋಟಿ ರೂಪಾಯಿ. ಈಗ ಅದು 33 ಸಾವಿರ ಕೋಟಿ ರೂ. ಮೀರಿದೆ. ಈವರೆಗೂ ಒಂದು ಹನಿ ನೀರು ಕೂಡ ಹರಿದಿಲ್ಲ. ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ತೊಟ್ಟು ನೀರು ಹೋಗಿಲ್ಲ. ಅಷ್ಟೇ ಅಲ್ಲದೆ, ಆ ಯೋಜನೆ ಕಾರ್ಯಕಗತ ಆಗುತ್ತಿರುವ ಹಾಸನ ಜಿಲ್ಲೆಯ ಸಕಲೇಶಪುರಕ್ಕೆ ಹತ್ತಿರದಲ್ಲಿರುವ ಅರಸೀಕರೆಗೇ ನೀರು ಬಂದಿಲ್ಲ. ಈ ಬಗ್ಗೆ ನಾನು ಪುಟಗಟ್ಟಲೆ ಮಾಹಿತಿ ಇಟ್ಟುಕೊಂಡು ಮಾತನಾಡಬಲ್ಲೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ:  SS ಮಲ್ಲಿಕಾರ್ಜುನ್‌ Vs ಜಮೀರ್ – ಟಿಕೆಟ್ ಕೇಳೋದು ನಮ್ಮ ಹಕ್ಕು: ಜಮೀರ್ ಟಾಂಗ್

 

ನಾನು ನೀರಾವರಿ ಸಚಿವನಾಗಿ, ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಿಯಾಗಿ ಕೆಲಸ ಮಾಡಿದ್ದೇನೆ. ನನಗೆ ಈ ಬಗ್ಗೆ ಪೂರ್ಣ ಮಾಹಿತಿ, ಅನುಭವ ಇದೆ. ಮೇಕೆದಾಟು ಯೋಜನೆಗೂ(Mekedatu Project) ರಾಜ್ಯ ಸರಕಾರವೇ ಅಡ್ಡಿಯಾಗಿದೆ. ಈ ಯೋಜನೆ ಕಾರ್ಯಗತವಾಗುವ ಪ್ರಸ್ತಾವಿತ ಜಾಗ ನನಗೆ ಗೊತ್ತು. ಒಂದು ಕಡೆ ಆನೆ ಕಾರಿಡಾರ್‌, ಮತ್ತೊಂಡೆ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಇದೆ. ಪ್ರತಿದಿನವೂ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷದಿಂದ ಅಮಾಯಕರು ಬಲಿ ಆಗುತ್ತಿದ್ದಾರೆ. ಇದನ್ನು ತಡೆಯಲು ರಾಜ್ಯ ಸರಕಾರಕ್ಕೆ ಆಗಿಲ್ಲ ಎಂದು ಮಾಜಿ ಪ್ರಧಾನಿಗಳು ಆರೋಪಿಸಿದರು.

ಪ್ರತೀ ದಿನವೂ ಈ ಸಂಘರ್ಷ ನಡೆಯುತ್ತಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ತರೀಕೆರೆ ಸೇರಿದಂತೆ ಅನೇಕ ಸ್ಥಳಗಳಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆನೆಗಳು ಬೆಳೆಗಳನ್ನು ನಾಶ ಮಾಡುತ್ತಿವೆ ಹಾಗೂ ತೋಟಗಳಲ್ಲಿ ದುಡಿಮೆ ಮಾಡುವ ರೈತರನ್ನು ಕೊಲ್ಲುತ್ತಿವೆ. ಇದನ್ನು ತಪ್ಪಿಸುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿಲ್ಲ ಎಂದು ಅವರು ದೂರಿದರು.

ಯಾವ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಕೊಡಬೇಕು ಎಂದು ರಾಜ್ಯ ಸರಕಾರ ಎತ್ತಿಹೊಳೆ ಯೋಜನೆ ಮೂಲಕ ರೂಪಿಸಿತ್ತೋ, ಈಗ ಆ ಯೋಜನೆ ಕಾರ್ಯಗತವಾಗದೇ ಅದೇ ಜಿಲ್ಲೆಗಳಿಗೆ ಬೆಂಗಳೂರಿನ ಕೊಳಚೆ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಿಸದೆ ಮಲೀನ ನೀರನ್ನು ಹರಿಸುತ್ತಿದೆ. ಆ ನೀರು ಮಾನವ ಬಳಕೆ ಯೋಗ್ಯವಲ್ಲದ್ದು. ಇದರ ಪರಿಣಾಮವಾಗಿ ಆ ಭಾಗದಲ್ಲಿ ಬೆಳೆಯುತ್ತಿರುವ ಬೆಳೆಗಳು ಹಾಗೂ ತರಕಾರಿಗಳು ವಿಷಕಾರಿಯಾಗುತ್ತಿದ್ದು, ಅವು ಸೇವನೆಗೆ ಯೋಗ್ಯವಲ್ಲದ್ದಾಗಿವೆ. ಜನರ ಜೀವದ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂಬುದನ್ನು ಮಾಜಿ ಪ್ರಧಾನಿಗಳು ಸದನಕ್ಕೆ ಮನವರಿಕೆ ಮಾಡಿಕೊಟ್ಟರು.

ಈ ಎರಡೂ ಜಿಲ್ಲೆಗಳು ಎದುರಿಸುತ್ತಿರುವ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಪ್ರಧಾನಿ ನರೇದ್ರ ಮೋದಿ ಅವರು ಹಾಗೂ ಕೇಂದ್ರದ ಅರಣ್ಯ, ಪರಿಸರ ಜೀವಿಶಾಸ್ತ್ರ ಖಾತೆ ಮಂತ್ರಿಗಳಾದ ಭೂಪೇಂದ್ರ ಯಾದವ್‌ ಅವರು ಕೂಡಲೇ ಮಧ್ಯಪ್ರವೇಶಿಸಿ ಸರಿಮಾಡಬೇಕು. ಇಲ್ಲವಾದರೆ ಈ ಜಿಲ್ಲೆಯ ಜನರು ವಿಪರೀತ ಬೆಲೆ ತೆರಲಿದ್ದಾರೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಈ ಸಂದರ್ಭದಲ್ಲಿ ಸಚಿವ ಭೂಪೇಂದ್ರ ಯಾದವ್‌ ಅವರು ಸದನದಲ್ಲಿ ಹಾಜರಿದ್ದು, ಮಾಜಿ ಪ್ರಧಾನಿಗಳು ಎತ್ತಿದ ಪ್ರಶ್ನೆಗಳನ್ನು ಆಲಿಸಿದರು.

TAGGED:congressHD Devegowdamekedatu projectyettinaholeಎತ್ತಿನಹೊಳೆಕಾಂಗ್ರೆಸ್ಮೇಕೆದಾಟು ಯೋಜನೆಹೆಚ್‍ಡಿ ದೇವೇಗೌಡ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Bengaluru Kalaburagi Vande Bharat Express train
Bagalkot

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Public TV
By Public TV
48 minutes ago
Restaurant Hotel
Bengaluru City

ಹೋಟೆಲ್‌ಗಳಿಗೆ ಸಂಕಷ್ಟ – ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್‌ ಸರಬರಾಜು ಬಂದ್‌

Public TV
By Public TV
49 minutes ago
Mariana L Naishuler
Latest

ಚೆನ್ನೈನ US ಕಾನ್ಸುಲೇಟ್ ಜನರಲ್ ಆಗಿ ಮರಿಯಾನಾ ಎಲ್.ನೈಶುಲರ್ ಅಧಿಕಾರ ಸ್ವೀಕಾರ

Public TV
By Public TV
1 hour ago
Attack on Iranian oil facilities US objects to Israels actions
Latest

ಇರಾನ್‌ ಬೀದಿಯಲ್ಲಿ ಬೆಂಕಿಯ ಮಳೆ – ಇಸ್ರೇಲ್‌ ದಾಳಿಗೆ ಅಮೆರಿಕ ಅಸಮಾಧಾನ

Public TV
By Public TV
1 hour ago
Mallikarjuna Mutya 3
Districts

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

Public TV
By Public TV
2 hours ago
Karwar Container Car Accident
Crime

ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಕಂಟೇನರ್ ಚಾಲಕ – ಮಗು ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?