ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡಿದೆ. ಪರಿಣಾಮವಾಗಿ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ, ದೋಹಾ ಮಾರ್ಗಗಳಿಂದ ಬೆಂಗಳೂರಿಗೆ ಬರಬೇಕಿದ್ದ 08 ಹಾಗೂ ಬೆಂಗಳೂರಿನಿಂದ ತೆರಳಬೇಕಿದ್ದ 09 ವಿಮಾನಗಳು ರದ್ದಾಗಿವೆ. ಇದನ್ನೂ ಓದಿ: ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?
ಏರ್‌ಸ್ಪೇಸ್ ನಿರ್ಬಂಧ ಮತ್ತು ಭದ್ರತಾ ಕಾರಣದಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸಲು ವಿಮಾನ ನಿಲ್ದಾಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯಕ್ಕೆ ಹೋಗುವ ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ ಉಂಟಾಗುವ ಸಾಧ್ಯತೆ ಇದೆ.

