ಮುಂಬೈ: 2026ರ ಟಿ20 ವಿಶ್ವಕಪ್ (T20 World Cup) ಪ್ರಶಸ್ತಿಯನ್ನು ಗೆದ್ದ ಭಾರತೀಯ ತಂಡಕ್ಕೆ 131 ಕೋಟಿ ರೂಪಾಯಿ ನಗದು ಬಹುಮಾನವನ್ನು ಘೋಷಿಸುವ ಮೂಲಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ತನ್ನದೇ ದಾಖಲೆಯನ್ನು ಮುರಿದಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಬಾರ್ಬಡೋಸ್ನಲ್ಲಿ 2024ರ ಟಿ20 ವಿಶ್ವಕಪ್ ಗೆದ್ದಾಗ, ಮಂಡಳಿಯು 125 ಕೋಟಿ ರೂಪಾಯಿ ನಗದು ಬಹುಮಾನವನ್ನು ಘೋಷಿಸಿತ್ತು. ಸೂರ್ಯಕುಮಾರ್ ಯಾದವ್ (Suryakumar Yadav) ನೇತೃತ್ವದ ತಂಡವು ಅಹಮದಾಬಾದ್ನಲ್ಲಿ ಇತಿಹಾಸ ಬರೆದು, ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡ ಮೊದಲ ತಂಡವಾಗಿ ಮಾರ್ಪಟ್ಟಾಗ ಬಿಸಿಸಿಐ ಇನ್ನೂ ದೊಡ್ಡ ಬಹುಮಾನವನ್ನು ಘೋಷಿಸಿದೆ. ಇದನ್ನೂ ಓದಿ: ಭಾರತಕ್ಕೆ 27 ಕೋಟಿ ನಗದು ಬಹುಮಾನ – ಯಾವ ತಂಡಕ್ಕೆ ಎಷ್ಟು ಕೋಟಿ?
2026 ರ ಐಸಿಸಿ ಪುರುಷರ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವು ಜಯಗಳಿಸಿದ ನಂತರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಂಡಕ್ಕೆ 131 ಕೋಟಿ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತ ಟ್ರೋಫಿಯನ್ನು ಎತ್ತಿಹಿಡಿಯಿತು. ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿತು. ಸತತ 2ನೇ ಬಾರಿಗೆ ಐಸಿಸಿ ಪುರುಷರ ಟಿ20 ವಿಶ್ವಕಪ್ ಅನ್ನು ಉಳಿಸಿಕೊಂಡ ಮೊದಲ ತಂಡವಾಯಿತು. ಈ ಗೆಲುವಿನೊಂದಿಗೆ, ಭಾರತವು ಐಸಿಸಿ ಪುರುಷರ ಟಿ20 ವಿಶ್ವಕಪ್ ಅನ್ನು ಮೂರು ಬಾರಿ ಗೆದ್ದ ಮೊದಲ ತಂಡವಾಯಿತು ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.
‘ಈ ಐತಿಹಾಸಿಕ ಸಾಧನೆಗಾಗಿ ಮಂಡಳಿಯು ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಆಯ್ಕೆದಾರರನ್ನು ಮತ್ತೊಮ್ಮೆ ಅಭಿನಂದಿಸುತ್ತದೆ. ಭವಿಷ್ಯದಲ್ಲಿ ಅವರಿಗೆ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತಾರೆ’ ಎಂದು ಹೇಳಿದೆ. ಇದನ್ನೂ ಓದಿ: ಸಿಕ್ಸರ್ನಲ್ಲಿ ಶತಕ ಹೊಡೆದು ವಿಶ್ವದಾಖಲೆ – ಯಾರು ಎಷ್ಟು ಸಿಕ್ಸ್?

