ಮುಂಬೈ: ದಂತ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬಳು ಗೆಳೆಯನ ಮಾನಸಿಕ ಕಿರುಕುಳದಿಂದ ಬೇಸತ್ತು ಮುಂಬೈನ (Mumbai) ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸ್ತುತಿ ಸೋನ್ವಾನೆ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಎಂಡಿಎಸ್ ವಿದ್ಯಾರ್ಥಿಯಾಗಿದ್ದ ಸ್ತುತಿ, ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದಳು. ಈಕೆ ಮೋಸ ಮಾಡಿದ್ದಾಳೆಂದು ಗೆಳೆಯ ಅವಮಾನಿಸುತ್ತಿದ್ದ. ಮನಸ್ಸಿಗೆ ನೋವುಂಟು ಮಾಡುವ ಹೇಳಿಕೆಗಳನ್ನು ನೀಡುತ್ತಿದ್ದ. ಇದರಿಂದ ಮನನೊಂದು ಸ್ತುತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆನ್ನಲಾಗಿದೆ. ಡೆತ್‌ನೋಟ್‌ನಲ್ಲಿ ದೆಹಲಿಯ ಹೃದಯವಿದ್ರಾವಕ ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿದ್ದಾಳೆ. ಇದನ್ನೂ ಓದಿ: ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
ಮುಂಬೈನ ಆಂಟೋಪ್ ಹಿಲ್ ಬಳಿ ಸ್ತುತಿ ತನ್ನ ಪೋಷಕರು ಮತ್ತು ಸಹೋದರಿಯೊಂದಿಗೆ ವಾಸಿಸುತ್ತಿದ್ದಳು. ನಿನ್ನೆ ಬೆಳಗ್ಗೆ 11 ಗಂಟೆಯವರೆಗೆ ಆಕೆ ತನ್ನ ಕೋಣೆಯಿಂದ ಹೊರಬರದಿದ್ದಾಗ, ಪೋಷಕರು ಕರೆ ಮಾಡಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಕೋಣೆಯ ಬಾಗಿಲು ಒಡೆದು ನೋಡಿದಾಗ, ಅವಳು ಸೀಲಿಂಗ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ.
ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಈಗ ಆಕೆಯ ಗೆಳೆಯನ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆಕೆಯ ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆ

