ಬೆಂಗಳೂರು/ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕೊಂಚ ರಿಲೀಫ್ ಸಿಕ್ಕಿದೆ. ಜಿಬಿಎ ಚುನಾವಣೆ ನಡೆಸುವ ವಿಚಾರವಾಗಿ ಮತ್ತೆ 2 ತಿಂಗಳು ಕಾಲಾವಕಾಶ ನೀಡಿ ಸುಪ್ರೀಂ ಕೋರ್ಟ್ (Supreme Court) ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮನವಿ ಮೇರೆಗೆ ಆಗಸ್ಟ್ 31 ರ ವರೆಗೆ ಸಮಯಾವಕಾಶ ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಇದನ್ನೂ ಓದಿ: ಜಿಬಿಎ ಚುನಾವಣೆ; ಸುಪ್ರೀಂನಲ್ಲಿ ಇಂದು ಅರ್ಜಿ ವಿಚಾರಣೆ
ಈ ಮೊದಲು ಜೂನ್ ಅಂತ್ಯದೊಳಗೆ ಚುನಾವಣೆ ನಡೆಸಲು ಕೋರ್ಟ್ ಸೂಚಿಸಿತ್ತು. ಹೆಚ್ಚುವರಿ ಮೂರು ತಿಂಗಳು ಕಾಲಾವಕಾಶ ಕೇಳಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿತ್ತು. ಆದರೆ, ಸರ್ಕಾರದ ವಾದವನ್ನು ಕೋರ್ಟ್ ತಿರಸ್ಕರಿಸಿ ಎರಡು ತಿಂಗಳ ಸಮಯ ನೀಡಿದೆ.
ಕರ್ನಾಟಕದಲ್ಲಿ ಜನಗಣತಿ ಮತ್ತು ಎಸ್‌ಐಆರ್ ಕಾರ್ಯ ನಡೆಯುತ್ತಿದೆ. ಸರ್ಕಾರಿ ನೌಕರರು ಕರ್ತವ್ಯದಲ್ಲಿ ತೊಡಗಿದ್ದಾರೆ. ಇದರಿಂದ ಚುನಾವಣೆ ನಡೆಸಲು ಕಷ್ಟವಾಗುತ್ತದೆ. ಹೀಗಾಗಿ, ಚುನಾವಣೆ ಮುಂದೂಡಿಕೆ ಮಾಡುವಂತೆ ರಾಜ್ಯ ಸರ್ಕಾರ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.

