ಕೋಲ್ಕತ್ತಾ: ಮುಂಬೈ ಇಂಡಿಯನ್ಸ್ (MI) ತಂಡದ ವಿಕೆಟ್ ಕೀಪರ್- ಬ್ಯಾಟರ್ ಕ್ವಿಂಟನ್ ಡಿ ಕಾಕ್ (Quinton De Kock) ಹಾಗೂ ಆಲ್‌ರೌಂಡರ್ ರಾಜ್ ಅಂಗದ್ ಬಾವಾ (Raj Angad Bawa) ಅವರು ಗಾಯದಿಂದಾಗಿ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ.
ಈ ಬಗ್ಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ‘ಎಕ್ಸ್’ನಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಮುಂಬೈ ತಂಡವು ಈಗಾಗಲೇ ಪ್ಲೇಆಫ್ ರೇಸ್‌ನಿಂದ ನಿರ್ಗಮಿಸಿದ್ದು, ಎರಡು ಪಂದ್ಯಗಳು ಬಾಕಿ ಉಳಿದಿವೆ. ಇಂದು ಕೋಲ್ಕತ್ತಾ ಹಾಗೂ ಮುಂಬೈ ತಂಡಗಳ ನಡುವೆ ಪಂದ್ಯ ನಡೆಯಲಿದೆ.
ಡಿ ಕಾಕ್ ಅವರು ಹೋದ ತಿಂಗಳು ಎಡಗೈ ಮಣಿಕಟ್ಟಿನ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ, ಕಳೆದ ಮೂರು ಪಂದ್ಯಗಳಲ್ಲಿ ಆಡಿರಲಿಲ್ಲ. ಇದೇ 14ರಂದು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜ್ ಬಾವಾ ಅವರ ಬಲಗೈ ಹೆಬ್ಬೆರಳಿಗೆ ಗಾಯವಾಗಿತ್ತು.

