ಬೆಂಗಳೂರು: ತಮಿಳುನಾಡಿನ ಮಧುರೈ (Madhurai) ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು ತಾರತಮ್ಯ ಧೋರಣೆಯ ಪ್ರದರ್ಶನವಾಗಿದೆ. ಇದು ಸರ್ವಥಾ ಸರಿಯಲ್ಲ. ಅವರಿಗೆ ಬೆಣ್ಣೆ, ನಮಗೆ ಸುಣ್ಣ ಎಂದರೆ ಹೇಗೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ (MB Patil) ಅವರು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರವು ಹತ್ತಿರದಲ್ಲೇ ಇರುವ ತಮಿಳುನಾಡು ಚುನಾವಣೆಯ ಮೇಲೆ ಕಣ್ಣಿಟ್ಟುಕೊಂಡು ಹೀಗೆ ಮಾಡಿರಬಹುದು. ಆದರೆ ನಮ್ಮ ರಾಜ್ಯದ ಬೇಡಿಕೆ ಬಗ್ಗೆ ಅದು ಉದಾಸೀನ ಮನೋಭಾವ ಪ್ರದರ್ಶಿಸಿರುವುದು ಪ್ರಶ್ನಾರ್ಹ ಎಂದಿದ್ದಾರೆ. ಇದನ್ನೂ ಓದಿ: ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ಎಕ್ಸ್ಪ್ರೆಸ್ ನೋಸ್ ವೀಲ್ನಲ್ಲಿ ದೋಷ – ತಪ್ಪಿದ ಭಾರೀ ದುರಂತ
ಕೇಂದ್ರದ ದ್ವಂದ್ವ ನೀತಿ: ತಮಿಳುನಾಡಿಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ!
ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ‘ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಿರ್ಧಾರವು, ಕರ್ನಾಟಕದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ವಿಷಯದಲ್ಲಿ ತೋರುತ್ತಿರುವ ತಾರತಮ್ಯ ನೀತಿಗೆ… pic.twitter.com/LRX7dzjzfg
— M B Patil (@MBPatil) March 11, 2026
ಹುಬ್ಬಳ್ಳಿ (Hubballi) ಮತ್ತು ಬೆಳಗಾವಿ (Belagavi) ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಬೇಕು. ಇದರಿಂದ ಉತ್ತರ ಕರ್ನಾಟಕ ಭಾಗಕ್ಕೆ ಅನುಕೂಲ ಆಗುತ್ತದೆ ಎಂದು ಕಳೆದ ವರ್ಷ (2025ರ ಜೂ.24ರಂದು) ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆಯಲಾಗಿತ್ತು. ಈಗ ನೋಡಿದರೆ ಹೀಗಾಗಿದೆ. ಧಾರವಾಡ ಸಂಸದರಾಗಿ ಕೇಂದ್ರ ಸಂಪುಟದಲ್ಲಿರುವ ಪ್ರಹ್ಲಾದ್ ಜೋಶಿ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಮತ್ತು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಈಗ ನಿರ್ದಿಷ್ಟವಾಗಿ ಧ್ವನಿ ಎತ್ತಿ, ರಾಜ್ಯದ ಹಿತಾಸಕ್ತಿಯ ಪರ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.
ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣ ಎರಡರ ಪೈಕಿ ಒಂದನ್ನಾದರೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಘೋಷಿಸಬೇಕು. ಎರಡನ್ನೂ ಉನ್ನತೀಕರಿಸಿದರೆ ಅದು ಇನ್ನೂ ಸ್ವಾಗತಾರ್ಹ. ರಾಜ್ಯದ ಅಗತ್ಯವನ್ನು ಕೇಂದ್ರ ಮನಗಾಣಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.ಇದನ್ನೂ ಓದಿ: ಕಮರ್ಷಿಯಲ್ ಗ್ಯಾಸ್ ಬಂದ್ – ಸಂಪೂರ್ಣವಾಗಿ ಸೌದೆ ಒಲೆ ಮೊರೆಹೋದ ಹೋಟೆಲ್ ಮಾಲೀಕರು

